1 Kings 16:33 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಹಾಬನು ಅಶೇರ ದೇವತೆಯನ್ನು ಆರಾಧಿಸಲು ಒಂದು ವಿಶೇಷ ಸ್ತಂಭವನ್ನು ನೆಡಿಸಿದನು. ಹೀಗೆ ಎಷ್ಟೋ ಕೆಟ್ಟಕಾರ್ಯಗಳನ್ನು ಮಾಡಿ ತನ್ನ ಮುಂಚೆ ಇದ್ದ ಇಸ್ರೇಲ್ ರಾಜರುಗಳಿಗಿಂತಲೂ ಹೆಚ್ಚಾಗಿ ಇಸ್ರೇಲ್ ದೇವರಾದ ಯೆಹೋವನನ್ನು ರೇಗಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿದನು. ಹೀಗೆ ಇನ್ನೂ ಎಷ್ಟೋ ಕೆಟ್ಟ ಕೆಲಸಗಳನ್ನು ಮಾಡಿ, ಮುಂಚೆ ಇದ್ದ ಎಲ್ಲಾ ಇಸ್ರಾಯೇಲ್ ರಾಜರಿಗಿಂತಲೂ ಹೆಚ್ಚಾಗಿ ಇಸ್ರಾಯೇಲ್ ದೇವರಾದ ಯೆಹೋವನಿಗೆ ಕೋಪ ಬರುವಂತೆ ಮಾಡಿದ.
Kannada BSI Bible 2016
ಅಹಾಬನು ತೋಪನ್ನು ಹಾಕಿಸಿದನು. ಹೀಗೆಯೆ ಅಹಾಬನು ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸುವ ಹಾಗೆ ತನಗೆ ಮುಂಚಿನ ಇಸ್ರಾಯೇಲಿನ ಅರಸುಗಳೆಲ್ಲರಿಗಿಂತ ಅಧಿಕ ವಾಗಿ ಕೆಟ್ಟತನಮಾಡಿದನು.ಅವನ ದಿವಸಗಳಲ್ಲಿ ಬೇತೇಲಿನವನಾದ ಹೀಯೇ ಲನು ಯೆರಿಕೋವನ್ನು ಕಟ್ಟಿಸಿದನು; ಕರ್ತನು ನೂನನ ಮಗನಾದ ಯೆಹೋಶುವನ ಮುಖಾಂತರ ಹೇಳಿದ್ದ ವಾಕ್ಯದ ಪ್ರಕಾರವೇ ಅವನು ಅದಕ್ಕೆ ಅಸ್ತಿವಾರವನ್ನು ಹಾಕಿದಾಗ ತನ್ನ ಚೊಚ್ಚಲ ಮಗನಾದ ಅಬೀರಾಮನೂ ಅದರ ಬಾಗಲುಗಳನ್ನು ಇಟ್ಟಾಗ ಅವನ ಚಿಕ್ಕಮಗನಾದ ಸೆಗೂಬನೂ ಸತ್ತರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಅಶೇರವಿಗ್ರಹಸ್ತಂಭವನ್ನು ನಿಲ್ಲಿಸಿದನು; ಹೀಗೆ ಇನ್ನು ಎಷ್ಟೋ ಕೆಟ್ಟ ಕೆಲಸಗಳನ್ನು ಮಾಡಿ ಮುಂಚೆ ಇದ್ದ ಎಲ್ಲಾ ಇಸ್ರಾಯೇಲ್ ರಾಜರಿಗಿಂತಲೂ ಹೆಚ್ಚಾಗಿ ಇಸ್ರಾಯೇಲ್ ದೇವರಾದ ಯೆಹೋವನನ್ನು ರೇಗಿಸಿದನು.
Kannada Bible (KNCL) BSI 2016
ಇದಲ್ಲದೆ, ಅಶೇರ ವಿಗ್ರಹಸ್ತಂಭವನ್ನು ನಿಲ್ಲಿಸಿದನು; ಹೀಗೆ ಇನ್ನು ಎಷ್ಟೋ ಅಧರ್ಮ ಕೆಲಸಗಳನ್ನು ಮಾಡಿ, ಮುಂದೆಯಿದ್ದ ಎಲ್ಲ ಇಸ್ರಯೇಲ್ ರಾಜರಿಗಿಂತಲೂ ಹೆಚ್ಚಾಗಿ ಇಸ್ರಯೇಲ್ ದೇವರಾದ ಸರ್ವೇಶ್ವರನನ್ನು ರೇಗಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಹಾಬನು ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿದನು. ಹೀಗೆಯೇ ಅಹಾಬನು ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಕೋಪ ಉಕ್ಕುವ ಹಾಗೆ ತನಗೆ ಮುಂಚಿನ ಇಸ್ರಾಯೇಲಿನ ಅರಸುಗಳೆಲ್ಲರಿಗಿಂತ ಅಧಿಕವಾಗಿ ಕೆಟ್ಟತನ ಮಾಡಿದನು.