1 Kings 16:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿನ್ನ ಕುಟುಂಬದ ಜನರು ನಗರದ ಬೀದಿಗಳಲ್ಲಿ ಸಾಯುತ್ತಾರೆ; ಅವರ ದೇಹಗಳನ್ನು ನಾಯಿಗಳು ತಿನ್ನುತ್ತವೆ. ನಿನ್ನ ಕುಟುಂಬದ ಕೆಲವು ಜನರು ಹೊಲಗಳಲ್ಲಿ ಸಾಯುತ್ತಾರೆ. ಅವರ ದೇಹಗಳನ್ನು ಪಕ್ಷಿಗಳು ತಿನ್ನುತ್ತವೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಕುಟುಂಬದವರಲ್ಲಿ ಪಟ್ಟಣದೊಳಗೆ ಸಾಯುವವರನ್ನು ನಾಯಿಗಳೂ ಮತ್ತು ಅಡವಿಯಲ್ಲಿ ಸಾಯುವವರನ್ನು ಪಕ್ಷಿಗಳು ತಿಂದುಬಿಡುವವು” ಎಂಬುದೇ.
Kannada BSI Bible 2016
ಬಾಷನ ಕಡೆಯವನಲ್ಲಿ ಪಟ್ಟಣದೊಳಗೆ ಸಾಯುವ ವನನ್ನು ನಾಯಿಗಳು ತಿನ್ನುವವು. ಅವನ ಕಡೆಯವನಲ್ಲಿ ಹೊಲದೊಳಗೆ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಕುಟುಂಬದವರಲ್ಲಿ ಪಟ್ಟಣದೊಳಗೆ ಸಾಯುವವರನ್ನು ನಾಯಿಗಳೂ ಅಡವಿಯಲ್ಲಿ ಸಾಯುವವರನ್ನು ಪಕ್ಷಿಗಳೂ ತಿಂದುಬಿಡುವವು ಎಂಬದೇ.
Kannada Bible (KNCL) BSI 2016
ನಿನ್ನ ಕುಟುಂಬದವರಲ್ಲಿ ಪಟ್ಟಣದೊಳಗೆ ಸಾಯುವವರನ್ನು ನಾಯಿಗಳು ಹಾಗು ಅಡವಿಯಲ್ಲಿ ಸಾಯುವವರನ್ನು ಪಕ್ಷಿಗಳು ತಿಂದುಬಿಡುವುವು\.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಾಷನ ಕಡೆಯವರಲ್ಲಿ ಪಟ್ಟಣದೊಳಗೆ ಸಾಯುವವನನ್ನು ನಾಯಿಗಳು ತಿನ್ನುವುವು. ಅವನ ಕಡೆಯವನಲ್ಲಿ ಹೊಲದೊಳಗೆ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವುವು,” ಎಂಬುದೇ ಆ ವಾಕ್ಯ.