1 Kings 16:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಾಷನು ಸತ್ತುಹೋದನು. ಅವನನ್ನು ತಿರ್ಚದಲ್ಲಿ ಸಮಾಧಿಮಾಡಿದರು. ಅವನ ಮಗನಾದ ಏಲನು ಅವನ ನಂತರ ಹೊಸ ರಾಜನಾದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ತಿರ್ಚದಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಏಲನು ಅರಸನಾದನು.
Kannada BSI Bible 2016
ಬಾಷನು ತನ್ನ ಪಿತೃಗಳ ಸಂಗಡ ಮಲಗಿದನು; ತಿರ್ಚದಲ್ಲಿ ಅವನು ಹೂಣಿಡಲ್ಪಟ್ಟನು; ಅವನ ಮಗನಾದ ಏಲನು ಅವನಿಗೆ ಬದಲಾಗಿ ಆಳಿ ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ತಿರ್ಚದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಏಲನು ಅರಸನಾದನು.
Kannada Bible (KNCL) BSI 2016
ಅವನು ನಿಧನನಾಗಿ ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ತಿರ್ಚದಲ್ಲಿ ಸಮಾಧಿಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ಏಲನು ಅರಸನಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಾಷನು ಮೃತನಾಗಿ ತನ್ನ ಪಿತೃಗಳ ಜೊತೆ ಸೇರಿದನು. ತಿರ್ಚದಲ್ಲಿ ಅವನ ಶವವನ್ನು ಸಮಾಧಿಮಾಡಿದರು. ಅವನ ಮಗ ಏಲನು ಅವನಿಗೆ ಬದಲಾಗಿ ಅರಸನಾದನು.