1 Kings 17:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಲೀಯನು ಚಾರೆಪ್ತಗೆ ಹೋದನು. ಅವನು ಊರು ಬಾಗಿಲಿಗೆ ಹೋದಾಗ, ಅಲ್ಲಿ ಒಬ್ಬ ವಿಧವೆಯನ್ನು ನೋಡಿದನು. ಆ ಸ್ತ್ರೀಯು ಬೆಂಕಿಗಾಗಿ ಸೌದೆಯನ್ನು ಒಟ್ಟುಗೂಡಿಸುತ್ತಿದ್ದಳು. ಎಲೀಯನು ಅವಳಿಗೆ, “ನನಗೆ ಕುಡಿಯುವುದಕ್ಕೆ ಚಂಬಿನಲ್ಲಿ ಸ್ವಲ್ಪ ನೀರನ್ನು ನೀನು ತರುವೆಯಾ?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಅಲ್ಲಿಂದ ಹೊರಟು ಚಾರೆಪ್ತಾದ ಊರುಬಾಗಿಲಿನ ಸಮೀಪಕ್ಕೆ ಬಂದಾಗ ಸೌದೆಯನ್ನು ಕೂಡಿಸುತ್ತಿರುವ ಒಬ್ಬ ವಿಧವೆಯನ್ನು ಕಂಡನು. ಅವನು ಆಕೆಯನ್ನು ಕೂಗಿ, “ದಯವಿಟ್ಟು ಕುಡಿಯುವುದಕ್ಕೆ ಒಂದು ತಂಬಿಗೆಯಲ್ಲಿ ನೀರು ತೆಗೆದುಕೊಂಡು ಬಾ” ಎಂದು ಹೇಳಿದನು.
Kannada BSI Bible 2016
ಹಾಗೆಯೆ ಅವನೆದ್ದು ಚಾರೆಪ್ತಾಕ್ಕೆ ಹೋಗಿ ಪಟ್ಟಣದ ಬಾಗಿಲ ಬಳಿಗೆ ಬಂದಾಗ ಇಗೋ, ಅಲ್ಲಿ ಒಬ್ಬ ವಿಧವೆಯು ಕಟ್ಟಿಗೆಗಳನ್ನು ಆರಿಸಿಕೊಳ್ಳುತ್ತಾ ಇದ್ದಳು. ಅವನು ಅವಳನ್ನು ಕರೆದು--ನೀನು ದಯಮಾಡಿ ಕುಡಿ ಯುವದಕ್ಕೆ ಪಾತ್ರೆಯಲ್ಲಿ ಸ್ವಲ್ಪ ನೀರನ್ನು ತಕ್ಕೊಂಡುಬಾ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಅಲ್ಲಿಂದ ಹೊರಟು ಚಾರೆಪ್ತದ ಊರುಬಾಗಲಿನ ಸಮೀಪಕ್ಕೆ ಬಂದಾಗ ಸೌದೆಯನ್ನು ಕೂಡಿಸುತ್ತಿರುವ ಒಬ್ಬ ವಿಧವೆಯನ್ನು ಕಂಡು ಆಕೆಯನ್ನು ಕೂಗಿ - ದಯವಿಟ್ಟು ಕುಡಿಯುವದಕ್ಕೆ ಒಂದು ತಂಬಿಗೆಯಲ್ಲಿ ನೀರು ತೆಗೆದುಕೊಂಡು ಬಾ ಎಂದು ಹೇಳಿದನು.
Kannada Bible (KNCL) BSI 2016
ಅವನು ಅಲ್ಲಿಂದ ಹೊರಟು ಸರೆಪ್ತಾದ ಊರು ಬಾಗಿಲಿನ ಸಮೀಪಕ್ಕೆ ಬಂದನು. ಸೌದೆ ಕೂಡಿಸುತ್ತಿದ್ದ ಒಬ್ಬ ವಿಧವೆಯನ್ನು ಕಂಡು ಆಕೆಯನ್ನು ಕರೆದು, “ದಯವಿಟ್ಟು ಕುಡಿಯುವುದಕ್ಕೆ ಒಂದು ತಂಬಿಗೆಯಲ್ಲಿ ನೀರು ತೆಗೆದುಕೊಂಡು ಬಾ,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗೆಯೇ ಅವನೆದ್ದು ಚಾರೆಪತಕ್ಕೆ ಹೋಗಿ, ಪಟ್ಟಣದ ಬಾಗಿಲ ಬಳಿಗೆ ಬಂದಾಗ, ಅಲ್ಲಿ ಒಬ್ಬ ವಿಧವೆಯು ಕಟ್ಟಿಗೆಗಳನ್ನು ಆರಿಸಿಕೊಳ್ಳುತ್ತಾ ಇದ್ದಳು. ಅವನು ಅವಳನ್ನು ಕರೆದು, “ನೀನು ದಯಮಾಡಿ ನನಗೆ ಕುಡಿಯುವುದಕ್ಕೆ ಪಾತ್ರೆಯಲ್ಲಿ ಸ್ವಲ್ಪ ನೀರನ್ನು ತೆಗೆದುಕೊಂಡು ಬಾ,” ಎಂದನು.