1 Kings 17:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಸ್ತ್ರೀಯು ಅವನಿಗೆ ನೀರನ್ನು ತರಲು ಹೋಗುತ್ತಿರುವಾಗ, ಎಲೀಯನು, “ದಯವಿಟ್ಟು ಒಂದು ತುಂಡು ರೊಟ್ಟಿಯನ್ನು ತೆಗೆದುಕೊಂಡು ಬಾ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಕೆಯು ಹೋಗುತ್ತಿರುವಾಗ ಪುನಃ ಆಕೆಯನ್ನು ಕರೆದು, “ನೀನು ಬರುವಾಗ ನನಗೋಸ್ಕರ ಒಂದು ತುಂಡು ರೊಟ್ಟಿಯನ್ನೂ ತೆಗೆದುಕೊಂಡು ಬಾ” ಅಂದನು.
Kannada BSI Bible 2016
ಅವಳು ತಕ್ಕೊಂಡು ಬರಲು ಹೋಗು ತ್ತಿರುವಾಗ ಅವನು ಅವಳನ್ನು ಕರೆದು--ನೀನು ದಯ ಮಾಡಿ ನಿನ್ನ ಕೈಯಲ್ಲಿ ರೊಟ್ಟಿಯ ತುಂಡನ್ನು ನನಗೆ ತಕ್ಕೊಂಡು ಬಾ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕೆಯು ಹೋಗುತ್ತಿರುವಾಗ ತಿರಿಗಿ ಆಕೆಯನ್ನು ಕರೆದು - ನೀನು ಬರುವಾಗ ನನಗೋಸ್ಕರ ಒಂದು ತುಂಡು ರೊಟ್ಟಿಯನ್ನೂ ತೆಗೆದುಕೊಂಡು ಬಾ ಅಂದನು.
Kannada Bible (KNCL) BSI 2016
ಆಕೆ ಹೋಗುತ್ತಿರುವಾಗ ಮತ್ತೆ ಆಕೆಯನ್ನು ಕರೆದು, “ನೀನು ಬರುವಾಗ ನನಗೆ ಒಂದು ತುಂಡು ರೊಟ್ಟಿಯನ್ನು ಸಹ ತೆಗೆದುಕೊಂಡು ಬಾ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವಳು ತೆಗೆದುಕೊಂಡು ಬರಲು ಹೋಗುತ್ತಿರುವಾಗ ಅವನು ಅವಳನ್ನು ಕರೆದು, “ನೀನು ದಯಮಾಡಿ ನಿನ್ನ ಕೈಯಲ್ಲಿ ರೊಟ್ಟಿಯ ತುಂಡನ್ನು ನನಗೆ ತೆಗೆದುಕೊಂಡು ಬಾ,” ಎಂದನು.