1 Kings 17:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಲೀಯನು ಆ ಸ್ತ್ರೀಗೆ, “ಚಿಂತಿಸದಿರು, ಮನೆಗೆ ಹೋಗಿ ನೀನು ಹೇಳಿದಂತೆ ಆಹಾರವನ್ನು ಸಿದ್ಧಪಡಿಸು. ಆದರೆ ನಿನ್ನಲ್ಲಿರುವ ಹಿಟ್ಟಿನಿಂದ ಮೊದಲು ಒಂದು ಚಿಕ್ಕ ರೊಟ್ಟಿಯನ್ನು ಮಾಡು. ಆ ರೊಟ್ಟಿಯನ್ನು ನನಗೆ ತಂದುಕೊಡು; ನಂತರ ನಿನಗೆ ಮತ್ತು ನಿನ್ನ ಮಗನಿಗೆ ಅಡಿಗೆ ಮಾಡಿಕೋ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಎಲೀಯನು ಆಕೆಗೆ, “ಹೆದರಬೇಡ, ನೀನು ಹೇಳಿದಂತೆಯೇ ಮಾಡು. ಆದರೆ ಮೊದಲು ಅದರಿಂದ ನನಗೋಸ್ಕರ ಒಂದು ಚಿಕ್ಕ ರೊಟ್ಟಿಯನ್ನು ಮಾಡಿಕೊಂಡು ಬಾ. ತರುವಾಯ ನಿನಗೂ ನಿನ್ನ ಮಗನಿಗೂ ಮಾಡಿಕೋ.
Kannada BSI Bible 2016
ಆಗ ಎಲೀಯನು ಅವಳಿಗೆ--ಭಯಪಡಬೇಡ; ನೀನು ಹೋಗಿ ನಿನ್ನ ಮಾತಿನ ಪ್ರಕಾರವೇ ಮಾಡು. ಆದರೆ ಮೊದಲು ಅದರಲ್ಲಿ ನನಗೆ ಒಂದು ಚಿಕ್ಕ ರೊಟ್ಟಿ ಮಾಡಿ, ನನ್ನ ಬಳಿಗೆ ತಕ್ಕೊಂಡು ಬಾ; ತರು ವಾಯ ನಿನಗೂ ನಿನ್ನ ಮಗನಿಗೂ ಸಿದ್ದಮಾಡಿಕೋ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಎಲೀಯನು ಆಕೆಗೆ - ಹೆದರಬೇಡ; ನೀನು ಹೇಳಿದಂತೆ ಮಾಡು, ಆದರೆ ಮೊದಲು ಅದರಿಂದ ನನಗೋಸ್ಕರ ಒಂದು ಚಿಕ್ಕ ರೊಟ್ಟಿಯನ್ನು ಮಾಡಿಕೊಂಡು ಬಾ; ತರುವಾಯ ನಿನಗೂ ನಿನ್ನ ಮಗನಿಗೂ ಮಾಡಿಕೋ.
Kannada Bible (KNCL) BSI 2016
ಆಗ ಎಲೀಯನು, “ಹೆದರಬೇಡ, ನೀನು ಹೇಳಿದಂತೆ ಮಾಡು; ಆದರೆ ಮೊದಲು ಅದರಿಂದ ನನಗೆ ಒಂದು ಚಿಕ್ಕ ರೊಟ್ಟಿಯನ್ನು ಮಾಡಿಕೊಂಡು ಬಾ; ತರುವಾಯ ನಿನಗೂ ನಿನ್ನ ಮಗನಿಗೂ ಮಾಡಿಕೋ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಎಲೀಯನು ಅವಳಿಗೆ, “ಭಯಪಡಬೇಡ, ನೀನು ಹೇಳಿದ ಪ್ರಕಾರವೇ ಮಾಡು. ಆದರೆ ಮೊದಲು ಅದರಲ್ಲಿ ನನಗೆ ಒಂದು ಚಿಕ್ಕ ರೊಟ್ಟಿಮಾಡಿ, ನನ್ನ ಬಳಿಗೆ ತೆಗೆದುಕೊಂಡು ಬಾ. ತರುವಾಯ ನಿನಗೂ, ನಿನ್ನ ಮಗನಿಗೂ ಸಿದ್ಧಮಾಡಿಕೋ.