1 Kings 17:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲಿನ ದೇವರಾದ ಯೆಹೋವನು ಹೇಳುವುದೇನೆಂದರೆ, ‘ಆ ಮಡಕೆಯಲ್ಲಿರುವ ಹಿಟ್ಟು ಎಂದೆಂದಿಗೂ ಖಾಲಿಯಾಗುವುದಿಲ್ಲ. ಆ ಪಾತ್ರೆಯಲ್ಲಿ ಯಾವಾಗಲೂ ಎಣ್ಣೆಯಿರುತ್ತದೆ. ಯೆಹೋವನು ಭೂಮಿಯ ಮೇಲೆ ಮಳೆಯನ್ನು ಸುರಿಸುವ ತನಕ ಇದು ಹೀಗೆಯೇ ಮುಂದುವರಿಯುತ್ತದೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲ್ ದೇವರಾದ ಯೆಹೋವನು ನಿನಗೆ, ‘ನಾನು ದೇಶಕ್ಕೆ ಮಳೆಯನ್ನು ಕಳುಹಿಸುವವರೆಗೆ ನಿನ್ನ ಮಡಿಕೆಯಲ್ಲಿರುವ ಹಿಟ್ಟು ತೀರುವುದಿಲ್ಲ ಮತ್ತು ಮೊಗೆಯಲ್ಲಿರುವ ಎಣ್ಣೆಯು ಮುಗಿದುಹೋಗುವುದಿಲ್ಲ’” ಎಂದು ಹೇಳುತ್ತಾನೆ.
Kannada BSI Bible 2016
ಕರ್ತನು ಭೂಮಿಯ ಮೇಲೆ ಮಳೆಯನ್ನು ಕೊಡುವ ವರೆಗೂ ಮಡಕೆಯಲ್ಲಿರುವ ಹಿಟ್ಟು ತೀರುವದಿಲ್ಲ; ತಂಬಿಗೆಯಲ್ಲಿರುವ ಎಣ್ಣೆಯು ಮುಗಿಯುವದಿಲ್ಲ ಎಂದು ಇಸ್ರಾಯೇಲಿನ ದೇವರಾದ ಕರ್ತನು ಹೇಳು ತ್ತಾನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ ದೇವರಾದ ಯೆಹೋವನು ನಿನಗೆ - ನಾನು ದೇಶಕ್ಕೆ ಮಳೆಯನ್ನು ಕಳುಹಿಸುವವರೆಗೆ ನಿನ್ನ ಮಡಕೆಯಲ್ಲಿರುವ ಹಿಟ್ಟು ತೀರುವದಿಲ್ಲ, ಮೊಗೆಯಲ್ಲಿರುವ ಎಣ್ಣೆಯು ಮುಗಿದುಹೋಗುವದಿಲ್ಲ ಎಂದು ಹೇಳುತ್ತಾನೆ ಅಂದನು.
Kannada Bible (KNCL) BSI 2016
ಇಸ್ರಯೇಲ್ ದೇವರಾದ ಸರ್ವೇಶ್ವರ ನಿನಗೆ, “ನಾನು ನಾಡಿಗೆ ಮಳೆಯನ್ನು ಕಳುಹಿಸುವವರೆಗೆ ನಿನ್ನ ಮಡಕೆಯಲ್ಲಿರುವ ಹಿಟ್ಟು ತೀರುವುದಿಲ್ಲ, ಕುಡಿಕೆಯಲ್ಲಿರುವ ಎಣ್ಣೆ ಮುಗಿದುಹೋಗುವುದಿಲ್ಲ,” ಎಂದು ಹೇಳುತ್ತಾರೆ ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ, ‘ಯೆಹೋವ ದೇವರು ಭೂಮಿಯ ಮೇಲೆ ಮಳೆಯನ್ನು ಕೊಡುವವರೆಗೂ ಮಡಕೆಯಲ್ಲಿರುವ ಹಿಟ್ಟು ತೀರುವುದಿಲ್ಲ. ಕುಡಿಕೆಯಲ್ಲಿರುವ ಎಣ್ಣೆಯು ಮುಗಿಯುವುದಿಲ್ಲ,’ ಎಂದು ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುತ್ತಾರೆ,” ಎಂದನು.