1 Kings 17:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಲೀಯನು ಅವಳಿಗೆ, “ನಿನ್ನ ಮಗನನ್ನು ನನಗೆ ಕೊಡು” ಎಂದು ಹೇಳಿದನು. ಎಲೀಯನು ಬಾಲಕನನ್ನು ಅವಳಿಂದ ತೆಗೆದುಕೊಂಡು, ಮೇಲಂತಸ್ತಿಗೆ ಹೋದನು. ಅವನು ನೆಲೆಸಿದ್ದ ಕೊಠಡಿಯ ಹಾಸಿಗೆಯ ಮೇಲೆ ಆ ಬಾಲಕನನ್ನು ಮಲಗಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಆಕೆಗೆ, “ನಿನ್ನ ಮಗನನ್ನು ನನಗೆ ಕೊಡು” ಎಂದು ಹೇಳಿ ಅವನನ್ನು ಆಕೆಯ ಮಡಿಲಿನಿಂದ ತೆಗೆದುಕೊಂಡು, ತಾನು ವಾಸವಾಗಿದ್ದ ಮೇಲಿನ ಕೋಣೆಗೆ ಹೋಗಿ ತನ್ನ ಮಂಚದ ಮೇಲೆ ಮಲಗಿಸಿದನು.
Kannada BSI Bible 2016
ಅವನು ಅವಳಿಗೆ--ನಿನ್ನ ಮಗನನ್ನು ನನಗೆ ಕೊಡು ಎಂದು ಹೇಳಿ ಅವನನ್ನು ಅವಳ ಮಡಲಿನಿಂದ ಎತ್ತಿಕೊಂಡು ತಾನು ವಾಸ ವಾಗಿರುವ ಉಪ್ಪರಿಗೆಗೆ ಹೋಗಿ,
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಮಗನನ್ನು ನನಗೆ ಕೊಡು ಎಂದು ಹೇಳಿ ಅವನನ್ನು ಆಕೆಯ ಉಡಿಲಿನಿಂದ ತೆಗೆದುಕೊಂಡು ತಾನು ವಾಸವಾಗಿದ್ದ ಮೇಲಿನ ಕೋಣೆಗೆ ಹೋಗಿ ತನ್ನ ಮಂಚದ ಮೇಲೆ ಮಲಗಿಸಿದನು. ಅನಂತರ ಅವನು ಯೆಹೋವನಿಗೆ -
Kannada Bible (KNCL) BSI 2016
ಆದರೆ ಎಲೀಯನು, “ನಿನ್ನ ಮಗನನ್ನು ನನಗೆ ಕೊಡು,” ಎಂದು ಹೇಳಿ ಅವನನ್ನು ಆಕೆಯ ಮಡಿಲಿನಿಂದ ತೆಗೆದುಕೊಂಡು, ತಾನು ವಾಸವಾಗಿದ್ದ ಮೇಲಿನ ಕೋಣೆಗೆ ಹೋಗಿ, ತನ್ನ ಮಂಚದ ಮೇಲೆ ಮಲಗಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಅವಳಿಗೆ, “ನಿನ್ನ ಮಗನನ್ನು ನನಗೆ ಕೊಡು,” ಎಂದು ಹೇಳಿ, ಅವನನ್ನು ಅವಳ ಮಡಿಲಿನಿಂದ ಎತ್ತಿಕೊಂಡು, ತಾನು ವಾಸವಾಗಿದ್ದ ಮಾಳಿಗೆಯ ಕೋಣೆಗೆ ಹೋಗಿ, ಅವನನ್ನು ಮಂಚದ ಮೇಲೆ ಮಲಗಿಸಿದನು.