1 Kings 17:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಆ ಬಾಲಕನ ಮೇಲೆ ಎಲೀಯನು ಮೂರು ಬಾರಿ ಬೋರಲಬಿದ್ದು, “ನನ್ನ ದೇವರಾದ ಯೆಹೋವನೇ, ಈ ಬಾಲಕನಿಗೆ ಮತ್ತೆ ಜೀವವನ್ನು ಕೊಡು” ಎಂದು ಪ್ರಾರ್ಥಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆನಂತರ ಹುಡುಗನ ಮೇಲೆ ಮೂರು ಸಾರಿ ಬೋರಲು ಬಿದ್ದು, “ನನ್ನ ದೇವರಾದ ಯೆಹೋವನೇ, ಈ ಹುಡುಗನ ಪ್ರಾಣವು ತಿರುಗಿ ಬರುವಂತೆ ಮಾಡು” ಎಂಬುದಾಗಿ ಆತನಿಗೆ ಮೊರೆಯಿಟ್ಟನು.
Kannada BSI Bible 2016
ಆಗ ಅವನು ಹುಡುಗನ ಮೇಲೆ ಮೂರು ಸಾರಿ ಬೋರ್ಲ ಬಿದ್ದುನನ್ನ ದೇವರಾದ ಓ ಕರ್ತನೇ, ಈ ಹುಡುಗನ ಪ್ರಾಣ ಅವನಲ್ಲಿ ತಿರಿಗಿ ಬರಲಿ ಎಂದು ಕರ್ತನನ್ನು ಕೂಗಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹುಡುಗನ ಮೇಲೆ ಮೂರು ಸಾರಿ ಬೋರ್ಲಬಿದ್ದು - ನನ್ನ ದೇವರಾದ ಯೆಹೋವನೇ, ಈ ಹುಡುಗನ ಪ್ರಾಣವು ತಿರಿಗಿ ಬರುವಂತೆ ಮಾಡು ಎಂಬದಾಗಿ ಆತನಿಗೆ ಮೊರೆಯಿಟ್ಟನು.
Kannada Bible (KNCL) BSI 2016
ಹುಡುಗನ ಮೇಲೆ ಮೂರುಸಾರಿ ಬೋರಲು ಬಿದ್ದು, “ನನ್ನ ದೇವರಾದ ಸರ್ವೇಶ್ವರಾ, ಈ ಹುಡುಗನ ಪ್ರಾಣ ತಿರುಗಿ ಬರುವಂತೆ ಮಾಡಿ,” ಎಂದು ಮೊರೆಯಿಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಬಾಲಕನ ಮೇಲೆ ಮೂರು ಸಾರಿ ಬೋರಲು ಬಿದ್ದು, “ನನ್ನ ದೇವರಾದ ಯೆಹೋವ ದೇವರೇ, ಈ ಬಾಲಕನ ಪ್ರಾಣ ಅವನಲ್ಲಿ ತಿರುಗಿಬರಲಿ,” ಎಂದು ಯೆಹೋವ ದೇವರನ್ನು ಕೂಗಿದನು.