1 Kings 17:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಲೀಯನು ಆ ಬಾಲಕನನ್ನು ಕೆಳ ಅಂತಸ್ತಿಗೆ ಕರೆದೊಯ್ದನು. ಎಲೀಯನು ಬಾಲಕನನ್ನು ಅವನ ತಾಯಿಗೆ ಒಪ್ಪಿಸಿ, “ನಿನ್ನ ಮಗ ಬದುಕಿದ್ದಾನೆ, ನೋಡು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಲೀಯನು ಆ ಹುಡುಗನನ್ನು ಅಲ್ಲಿಂದ ಕೆಳಗೆ ತೆಗೆದುಕೊಂಡು ಹೋಗಿ, ಅವನ ತಾಯಿಗೆ ಒಪ್ಪಿಸಿ, “ಇಗೋ, ನೋಡು ನಿನ್ನ ಮಗನು ಜೀವಿಸುತ್ತಿದ್ದಾನೆ” ಅಂದನು.
Kannada BSI Bible 2016
ಆಗ ಎಲೀಯನು ಹುಡುಗನನ್ನು ಎತ್ತಿಕೊಂಡು ಉಪ್ಪರಿಗೆ ಯಿಂದ ಕೆಳಗಿರುವ ಮನೆಗೆ ತೆಗೆದುಕೊಂಡು ಬಂದು ಅವನನ್ನು ಅವನ ತಾಯಿಗೆ ಕೊಟ್ಟನು. ಅವನುನೋಡು, ನಿನ್ನ ಮಗನು ಜೀವದಿಂದಿದ್ದಾನೆಂದು ಎಲೀ ಯನು ಹೇಳಿದನು.ಆಗ ಸ್ತ್ರೀಯು ಎಲೀಯನಿಗೆನೀನು ದೇವರ ಮನುಷ್ಯನೆಂದೂ ನಿನ್ನ ಬಾಯಿಯ ಲ್ಲಿರುವ ಕರ್ತನ ವಾಕ್ಯವು ನಿಜವೆಂದೂ ಇದರಿಂದ ಈಗ ತಿಳಿದಿದ್ದೇನೆ ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ತಾಯಿಗೆ ಒಪ್ಪಿಸಿ - ಇಗೋ, ನೋಡು; ನಿನ್ನ ಮಗನು ಜೀವಿಸುತ್ತಾನೆ ಅಂದನು.
Kannada Bible (KNCL) BSI 2016
ಎಲೀಯನು ಆ ಹುಡುಗನನ್ನು ಅಲ್ಲಿಂದ ಕೆಳಗೆ ತೆಗೆದುಕೊಂಡುಹೋಗಿ ಅವನ ತಾಯಿಗೆ ಒಪ್ಪಿಸಿ, “ಇಗೋ, ನೋಡು; ನಿನ್ನ ಮಗ ಜೀವಂತನಾಗಿದ್ದಾನೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಎಲೀಯನು ಬಾಲಕನನ್ನು ಎತ್ತಿಕೊಂಡು ಉಪ್ಪರಿಗೆಯಿಂದ ಕೆಳಗಿರುವ ಮನೆಗೆ ತೆಗೆದುಕೊಂಡು ಬಂದು, ಅವನನ್ನು ಅವನ ತಾಯಿಗೆ ಕೊಟ್ಟು, “ನೋಡು, ನಿನ್ನ ಮಗನು ಜೀವದಿಂದಿದ್ದಾನೆ,” ಎಂದು ಹೇಳಿದನು.