1 Kings 17:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ಆ ಹಳ್ಳದ ನೀರನ್ನು ಕುಡಿಯಬಹುದು. ಆ ಸ್ಥಳದಲ್ಲಿರುವ ನಿನಗೆ ಆಹಾರವನ್ನು ತಂದುಕೊಡಬೇಕೆಂದು ನಾನು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಹಳ್ಳದ ನೀರು ನಿನಗೆ ಕುಡಿಯುವ ಪಾನವಾಗಿರುವುದು. ನಿನಗೆ ಆಹಾರ ತಂದು ಕೊಡಬೇಕೆಂದು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ” ಎಂದು ಹೇಳಿದನು.
Kannada BSI Bible 2016
ನೀನು ಆ ಹಳ್ಳದ ನೀರನ್ನು ಕುಡಿಯುವಿ; ನಿನಗೆ ಆಹಾರವನ್ನು ತಂದು ಕೊಡಲು ನಾನು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಹಳ್ಳದ ನೀರು ನಿನಗೆ ಪಾನವಾಗಿರುವದು; ನಿನಗೆ ಆಹಾರತಂದುಕೊಡಬೇಕೆಂದು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ ಎಂದು ಹೇಳಿದನು.
Kannada Bible (KNCL) BSI 2016
ಆ ಹಳ್ಳದ ನೀರು ನಿನಗೆ ಪಾನವಾಗಿರುವುದು; ನಿನಗೆ ಆಹಾರ ತಂದುಕೊಡಬೇಕೆಂದು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿ ನೀನು ಆ ಹೊಳೆಯ ನೀರನ್ನು ಕುಡಿಯುವೆ. ಅಲ್ಲಿ ನಿನಗೆ ಆಹಾರವನ್ನು ತಂದು ಕೊಡಲು ನಾನು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ,” ಎಂದು ಹೇಳಿದನು.