1 Kings 17:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕಾಗೆಗಳು ಪ್ರತಿ ಮುಂಜಾನೆ ಮತ್ತು ಸಂಜೆ ಎಲೀಯನಿಗೆ ರೊಟ್ಟಿ ಮತ್ತು ಮಾಂಸವನ್ನು ತಂದುಕೊಡುತ್ತಿದ್ದವು. ಎಲೀಯನು ಹಳ್ಳದ ನೀರನ್ನು ಕುಡಿಯುತ್ತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಾಗೆಗಳು ಅವನಿಗೆ ಪ್ರಾತಃಕಾಲದಲ್ಲಿಯೂ ಸಾಯಂಕಾಲದಲ್ಲಿಯೂ ರೊಟ್ಟಿ ಮತ್ತು ಮಾಂಸಗಳನ್ನು ತಂದುಕೊಡುತ್ತಿದ್ದವು. ಅವನು ಇವುಗಳನ್ನು ತಿನ್ನುತ್ತಿದ್ದನು. ಹಳ್ಳದ ನೀರು ಅವನಿಗೆ ಪಾನವಾಗಿತ್ತು.
Kannada BSI Bible 2016
ಕಾಗೆಗಳು ಅವನಿಗೆ ಉದಯದಲ್ಲಿಯೂ ಸಾಯಂಕಾಲದಲ್ಲಿಯೂ ರೊಟ್ಟಿಯನ್ನೂ ಮಾಂಸವನ್ನೂ ತಕ್ಕೊಂಡು ಬಂದವು. ಅವನು ಆ ಹಳ್ಳದ ನೀರನ್ನು ಕುಡಿಯುತ್ತಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಾಗೆಗಳು ಅವನಿಗೆ ಪ್ರಾತಃಕಾಲದಲ್ಲಿಯೂ ಸಾಯಂಕಾಲದಲ್ಲಿಯೂ ರೊಟ್ಟಿ, ಮಾಂಸ ಇವುಗಳನ್ನು ತಂದುಕೊಡುತ್ತಿದ್ದವು. ಅವನು ಇವುಗಳನ್ನು ತಿನ್ನುತ್ತಿದ್ದನು; ಹಳ್ಳದ ನೀರು ಅವನಿಗೆ ಪಾನವಾಗಿತ್ತು.
Kannada Bible (KNCL) BSI 2016
ಕಾಗೆಗಳು ಅವನಿಗೆ ಬೆಳಿಗ್ಗೆ ಹಾಗು ಸಂಜೆ ರೊಟ್ಟಿ, ಮಾಂಸ, ಇವುಗಳನ್ನು ತಿನ್ನಲು ತಂದುಕೊಡುತ್ತಿದ್ದವು. ಹಳ್ಳದ ನೀರು ಅವನಿಗೆ ಪಾನವಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಾಗೆಗಳು ಅವನಿಗೆ ಉದಯಕಾಲದಲ್ಲಿ ರೊಟ್ಟಿಯನ್ನೂ, ಮಾಂಸವನ್ನೂ, ಸಂಜೆಯಲ್ಲಿ ರೊಟ್ಟಿಯನ್ನೂ, ಮಾಂಸವನ್ನೂ ತೆಗೆದುಕೊಂಡು ಬಂದವು, ಅವನು ಆ ಹೊಳೆಯ ನೀರನ್ನು ಕುಡಿದನು.