1 Kings 18:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬರಗಾಲದ ಮೂರನೆ ವರ್ಷದಲ್ಲಿ ಯೆಹೋವನು ಎಲೀಯನಿಗೆ, “ಹೋಗಿ, ರಾಜನಾದ ಅಹಾಬನನ್ನು ಭೇಟಿಮಾಡು. ನಾನು ಬೇಗ ಮಳೆಯನ್ನು ಸುರಿಸುತ್ತೇನೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನೇಕ ದಿನಗಳಾದ ನಂತರ ಎಲೀಯನಿಗೆ ಯೆಹೋವನ ವಾಕ್ಯವುಂಟಾಯಿತು. ಬರಗಾಲದ ಮೂರನೆಯ ವರ್ಷದಲ್ಲಿ ಯೆಹೋವನು ಅವನಿಗೆ, “ನೀನು ಹೋಗಿ ಅಹಾಬನನ್ನು ಕಾಣು. ನಾನು ದೇಶಕ್ಕೆ ಮಳೆ ಕೊಡುತ್ತೇನೆ” ಎಂದನು.
Kannada BSI Bible 2016
ಅನೇಕ ದಿವಸಗಳು ಹೋದ ತರುವಾಯ ಮೂರನೇ ವರುಷದಲ್ಲಿ ಏನಾಯಿತಂದರೆ, ಕರ್ತನ ವಾಕ್ಯವು ಎಲೀಯನಿಗೆ ಉಂಟಾಗಿ--ನೀನು ಹೋಗಿ ಅಹಾಬನಿಗೆ ನಿನ್ನನ್ನು ತೋರಿಸಿಕೋ. ಆಗ ನಾನು ಭೂಮಿಯ ಮೇಲೆ ಮಳೆಯನ್ನು ಕಳುಹಿಸುವೆನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನೇಕ ದಿವಸಗಳಾದನಂತರ ಎಲೀಯನಿಗೆ ಯೆಹೋವನ ವಾಕ್ಯವುಂಟಾಯಿತು. ಬರಗಾಲದ ಮೂರನೆಯ ವರುಷದಲ್ಲಿ ಆತನು ಅವನಿಗೆ - ನೀನು ಹೋಗಿ ಅಹಾಬನನ್ನು ಕಾಣು; ನಾನು ದೇಶಕ್ಕೆ ಮಳೆ ಕೊಡುತ್ತೇನೆ ಅಂದನು.
Kannada Bible (KNCL) BSI 2016
ಅನೇಕ ದಿವಸಗಳಾದನಂತರ ಎಲೀಯನಿಗೆ ಸರ್ವೇಶ್ವರನ ವಾಣಿ ಉಂಟಾಯಿತು. ಬರಗಾಲದ ಮೂರನೆಯವರ್ಷದಲ್ಲಿ ಸರ್ವೇಶ್ವರ ಅವನಿಗೆ, “ನೀನು ಹೋಗಿ ಅಹಾಬನನ್ನು ಕಾಣು; ನಾನು ನಾಡಿಗೆ ಮಳೆಕೊಡುತ್ತೇನೆ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನೇಕ ದಿವಸಗಳಾದ ತರುವಾಯ, ಮೂರನೆಯ ವರ್ಷದಲ್ಲಿ, ಯೆಹೋವ ದೇವರ ವಾಕ್ಯವು ಎಲೀಯನಿಗೆ ಬಂದಿತು, “ನೀನು ಹೋಗಿ ಅಹಾಬನಿಗೆ ನಿನ್ನನ್ನು ಪ್ರಕಟಿಸಿಕೋ. ಆಗ ನಾನು ಭೂಮಿಯ ಮೇಲೆ ಮಳೆಯನ್ನು ಕಳುಹಿಸುವೆನು,” ಎಂದು ಹೇಳಿದರು.