1 Kings 18:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಏನು ಮಾಡಿದೆನೆಂಬುದು ನಿನಗೆ ತಿಳಿಯಲಿಲ್ಲವೇ? ಯೆಹೋವನ ಪ್ರವಾದಿಗಳನ್ನು ಈಜೆಬೆಲಳು ಕೊಲ್ಲುತ್ತಿದ್ದಾಗ ನೂರು ಮಂದಿ ಪ್ರವಾದಿಗಳನ್ನು ನಾನು ಗುಹೆಗಳಲ್ಲಿ ಅಡಗಿಸಿಟ್ಟೆನು. ಐವತ್ತು ಮಂದಿ ಪ್ರವಾದಿಗಳನ್ನು ಒಂದು ಗುಹೆಯಲ್ಲಿಯೂ ಉಳಿದ ಐವತ್ತು ಮಂದಿಯನ್ನು ಮತ್ತೊಂದು ಗುಹೆಯಲ್ಲಿಯೂ ನಾನು ಅಡಗಿಸಿಟ್ಟೆನು. ಅವರಿಗೆ ಆಹಾರವನ್ನೂ ನೀರನ್ನೂ ನಾನು ತಂದುಕೊಡುತ್ತಿದ್ದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ನಾನು ಮಾಡಿದ್ದು ನನ್ನ ಸ್ವಾಮಿಯಾದ ನಿನಗೆ ಗೊತ್ತಾಗಲಿಲ್ಲವೋ? ಅವರಲ್ಲಿ ನೂರು ಜನರನ್ನು ತೆಗೆದುಕೊಂಡು ಐವತ್ತೈವತ್ತು ಜನರನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು, ಅನ್ನ ಪಾನಗಳನ್ನು ಕೊಟ್ಟು ಸಾಕಿದೆನಲ್ಲವೇ.
Kannada BSI Bible 2016
ಈಜೆಬೆಲಳು ಕರ್ತನ ಪ್ರವಾದಿಗಳನ್ನು ಕೊಂದುಹಾಕಿದಾಗ ನಾನು ಕರ್ತನ ಪ್ರವಾದಿಗಳಲ್ಲಿ ನೂರು ಮಂದಿಯನ್ನು ಐವತ್ತು ಐವತ್ತು ಮಂದಿಯಾಗಿ ಗವಿಯಲ್ಲಿ ಬಚ್ಚಿಟ್ಟು ಅವ ರಿಗೆ ಆಹಾರವನ್ನೂ ನೀರನ್ನೂ ಕೊಟ್ಟು ಸಂರಕ್ಷಿಸಿದ್ದು ನನ್ನ ಯಜಮಾನನಾದ ನಿನಗೆ ಹೇಳಲ್ಪಟ್ಟದ್ದಿಲ್ಲವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ನಾನು ಮಾಡಿದ್ದು ನನ್ನ ಸ್ವಾವಿುಯಾದ ನಿನಗೆ ತಿಳಿಸಲ್ಪಡಲಿಲ್ಲವೋ? ಅವರಲ್ಲಿ ನೂರು ಮಂದಿಯನ್ನು ತೆಗೆದುಕೊಂಡು ಐವತ್ತೈವತ್ತು ಮಂದಿಯನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು ಅನ್ನಪಾನಗಳನ್ನು ಕೊಟ್ಟು ಸಾಕಿದೆನಲ್ಲವೇ.
Kannada Bible (KNCL) BSI 2016
ಈಜೆಬೆಲಳು ಸರ್ವೇಶ್ವರನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ನಾನು ಮಾಡಿದ್ದು ನನ್ನ ಸ್ವಾಮಿಯಾದ ತಮಗೆ ತಿಳಿಸಲಾಗಿದೆ ಅಲ್ಲವೆ? ಅವರಲ್ಲಿ ನೂರು ಮಂದಿಯನ್ನು ತೆಗೆದುಕೊಂಡು ಹೋಗಿ ಐವತ್ತೈವತ್ತು ಮಂದಿಯನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು, ಅನ್ನಪಾನಗಳನ್ನು ಕೊಟ್ಟು ಸಾಕಿದೆನಲ್ಲವೇ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಜೆಬೆಲಳು ಪ್ರವಾದಿಗಳನ್ನು ಕೊಲ್ಲುತ್ತಿದ್ದ ಸಮಯದಲ್ಲಿ ಯೆಹೋವ ದೇವರ ಪ್ರವಾದಿಗಳನ್ನು ನೂರು ಮಂದಿಯನ್ನು, ಐವತ್ತು ಐವತ್ತು ಮಂದಿಯಾಗಿ ಗವಿಯಲ್ಲಿ ಬಚ್ಚಿಟ್ಟು, ಅವರಿಗೆ ಆಹಾರವನ್ನೂ, ನೀರನ್ನೂ ಕೊಟ್ಟು ಸಂರಕ್ಷಿಸಿದ್ದು ನನ್ನ ಯಜಮಾನನಾದ ನೀನು ಕೇಳಿಸಿಕೊಳ್ಳಲಿಲ್ಲವೇ?