1 Kings 18:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈಗ ಕರ್ಮೆಲ್ ಬೆಟ್ಟದ ಮೇಲೆ ನನ್ನನ್ನು ಭೇಟಿಮಾಡಲು ಎಲ್ಲಾ ಇಸ್ರೇಲರಿಗೆ ತಿಳಿಸು. ಬಾಳನ ನಾನೂರೈವ್ತತು ಮಂದಿ ಪ್ರವಾದಿಗಳನ್ನು ಆ ಸ್ಥಳಕ್ಕೆ ಕರೆದುಕೊಂಡು ಬಾ. ಸುಳ್ಳುದೇವತೆಯಾದ ಅಶೇರಳ ನಾನೂರು ಮಂದಿ ಪ್ರವಾದಿಗಳನ್ನೂ ಕರೆದುಕೊಂಡು ಬಾ. ಆ ಪ್ರವಾದಿಗಳನ್ನು ರಾಣಿಯಾದ ಈಜೆಬೆಲಳು ಪೋಷಣೆ ಮಾಡುತ್ತಿದ್ದಾಳೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಈಗ ಎಲ್ಲಾ ಇಸ್ರಾಯೇಲರನ್ನೂ, ಈಜೆಬೆಲಳಿಂದ ಪೋಷಣೆ ಹೊಂದುವ ಬಾಳನ ನಾನೂರೈವತ್ತು ಪ್ರವಾದಿಗಳನ್ನು ಮತ್ತು ಅಶೇರ ದೇವತೆಯ ನಾನೂರು ಪ್ರವಾದಿಗಳನ್ನು ಕರ್ಮೆಲ್ ಬೆಟ್ಟಕ್ಕೆ ಕರೆಯಿಸು” ಎಂದು ಹೇಳಿದನು.
Kannada BSI Bible 2016
ಆದದರಿಂದ ನೀನು ಸಮಸ್ತ ಇಸ್ರಾಯೇಲ್ಯರನ್ನೂ ಬಾಳನ ನಾನೂರ ಐವತ್ತು ಮಂದಿ ಪ್ರವಾದಿಗಳನ್ನೂ ಈಜೆಬೇಲಳ ಮೇಜಿನ ಹತ್ತಿರ ಭೋಜನ ಮಾಡುವ ತೋಪುಗಳ ನಾನೂರು ಮಂದಿ ಪ್ರವಾದಿಗಳನ್ನೂ ನನ್ನ ಬಳಿಗೆ ಕರ್ಮೆಲ್ ಬೆಟ್ಟಕ್ಕೆ ಕೂಡಿಸು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಈಗ ಎಲ್ಲಾ ಇಸ್ರಾಯೇಲ್ಯರನ್ನೂ ಈಜೆಬೆಲಳಿಂದ ಪೋಷಣೆ ಹೊಂದುವ ಬಾಳನ ನಾನೂರೈವತ್ತು ಮಂದಿ ಪ್ರವಾದಿಗಳನ್ನೂ ಅಶೇರದೇವತೆಯ ನಾನೂರು ಮಂದಿ ಪ್ರವಾದಿಗಳನ್ನೂ ಕರ್ಮೆಲ್‍ಬೆಟ್ಟಕ್ಕೆ ಕರಿಸು ಎಂದು ಹೇಳಿದನು.
Kannada Bible (KNCL) BSI 2016
ನೀನು ಈಗ ಎಲ್ಲ ಇಸ್ರಯೇಲರನ್ನು, ಈಜೆಬೆಲಳಿಂದ ಪೋಷಣೆ ಹೊಂದುವ ಬಾಳನ ನಾನೂರೈವತ್ತುಮಂದಿ ಪ್ರವಾದಿಗಳನ್ನು ಹಾಗೂ ಅಶೇರದೇವತೆಯ ನಾನೂರೈವತ್ತುಮಂದಿ ಪ್ರವಾದಿಗಳನ್ನು ಕರ್ಮೆಲ್ ಬೆಟ್ಟಕ್ಕೆ ಕರೆಯಿಸು,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ನೀನು ಕರ್ಮೆಲು ಬೆಟ್ಟದ ಬಳಿಯಲ್ಲಿ ಸಮಸ್ತ ಇಸ್ರಾಯೇಲನ್ನೂ, ಬಾಳನ ನಾನೂರ ಐವತ್ತು ಮಂದಿ ಪ್ರವಾದಿಗಳನ್ನೂ, ಈಜೆಬೆಲಳ ಮೇಜಿನ ಹತ್ತಿರ ಭೋಜನಮಾಡುವ ಅಶೇರನ ನಾನೂರು ಮಂದಿ ಪ್ರವಾದಿಗಳನ್ನೂ ನನ್ನ ಬಳಿಗೆ ಕೂಡಿಸು,” ಎಂದನು.