1 Kings 18:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರೆಲ್ಲರ ಹತ್ತಿರಕ್ಕೆ ಎಲೀಯನು ಬಂದು ಅವರಿಗೆ, “ನೀವು ಯಾರನ್ನು ಹಿಂಬಾಲಿಸಬೇಕೆಂಬುದನ್ನು ಯಾವಾಗ ತೀರ್ಮಾನಿಸುತ್ತೀರಿ? ಯೆಹೋವನು ನಿಜವಾದ ದೇವರಾಗಿದ್ದರೆ, ನೀವು ಆತನನ್ನು ಹಿಂಬಾಲಿಸಬೇಕು; ಬಾಳನೇ ನಿಜವಾದ ದೇವರಾಗಿದ್ದರೆ, ನೀವು ಅವನನ್ನೇ ಹಿಂಬಾಲಿಸಬೇಕು” ಎಂದನು. ಜನರು ಏನನ್ನೂ ಹೇಳಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಲೀಯನು ಎಲ್ಲಾ ಜನರ ಹತ್ತಿರ ಹೋಗಿ ಅವರಿಗೆ, “ನೀವು ಎಷ್ಟರವರೆಗೆ ಎರಡು ಮನಸ್ಸುಳ್ಳವರಾಗಿರುವಿರಿ. ಯೆಹೋವನು ದೇವರಾಗಿದ್ದರೆ ಆತನನ್ನೇ ಹಿಂಬಾಲಿಸಿರಿ ಬಾಳನು ದೇವರಾಗಿದ್ದರೆ ಅವನನ್ನೇ ಹಿಂಬಾಲಿಸಿರಿ” ಎಂದು ಹೇಳಿದನು. ಜನರು ಇದಕ್ಕೆ ಏನೂ ಉತ್ತರಕೊಡದೆ ಸುಮ್ಮನಿರುವುದನ್ನು ಕಂಡನು.
Kannada BSI Bible 2016
ಆಗ ಎಲೀಯನು ಸಕಲ ಜನರ ಬಳಿಗೆ ಬಂದು--ನೀವು ಎರಡು ಅಭಿಪ್ರಾಯಗಳ ಮಧ್ಯದಲ್ಲಿ ಎಷ್ಟರ ವರೆಗೂ ನಿಂತವರಾಗಿ ಇರುವಿರಿ. ಕರ್ತನು ದೇವರಾಗಿದ್ದರೆ ಆತನನ್ನು ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ ಅವನನ್ನು ಹಿಂಬಾಲಿಸಿರಿ ಅಂದನು. ಜನರು ಅವನಿಗೆ ಒಂದು ಮಾತಾದರೂ ಹೇಳಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲೀಯನು ಎಲ್ಲಾ ಜನರ ಹತ್ತಿರ ಹೋಗಿ ಅವರಿಗೆ - ನೀವು ಎಷ್ಟರವರೆಗೆ ಎರಡು ಮನಸ್ಸುಳ್ಳವರಾಗಿರುವಿರಿ? ಯೆಹೋವನು ದೇವರಾಗಿದ್ದರೆ ಆತನನ್ನೇ ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ ಅವನನ್ನೇ ಹಿಂಬಾಲಿಸಿರಿ ಎಂದು ಹೇಳಿದನು. ಜನರು ಇದಕ್ಕೆ ಏನೂ ಉತ್ತರಕೊಡದೆ ಸುಮ್ಮನಿರುವದನ್ನು ಕಂಡು
Kannada Bible (KNCL) BSI 2016
ಎಲೀಯನು ಜನರೆಲ್ಲರ ಬಳಿಗೆ ಹೋಗಿ, “ನೀವು ಎಷ್ಟರವರೆಗೆ ಎರಡು ಮನಸ್ಸುಳ್ಳವರಾಗಿರುವಿರಿ? ಸರ್ವೇಶ್ವರಸ್ವಾಮಿ ನಿಮಗೆ ದೇವರಾಗಿದ್ದರೆ ಅವರನ್ನೇ ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ ಅವನನ್ನೇ ಹಿಂಬಾಲಿಸಿರಿ,” ಎಂದು ಹೇಳಿದನು. ಜನರು ಇದಕ್ಕೆ ಏನೂ ಉತ್ತರಕೊಡದೆ ಸುಮ್ಮನಿರುವುದನ್ನು ಕಂಡು, ಅವನು ಮತ್ತೆ ಅವರಿಗೆ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಎಲೀಯನು ಸಕಲ ಜನರ ಬಳಿಗೆ ಬಂದು, “ನೀವು ಎರಡು ಅಭಿಪ್ರಾಯಗಳ ಮಧ್ಯದಲ್ಲಿ ಎಷ್ಟರವರೆಗೂ ನಿಂತುಕೊಂಡಿರುವಿರಿ? ಯೆಹೋವ ದೇವರು ದೇವರಾಗಿದ್ದರೆ, ಅವರನ್ನೇ ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ, ಅವನನ್ನೇ ಹಿಂಬಾಲಿಸಿರಿ,” ಎಂದನು. ಜನರು ಅವನಿಗೆ ಒಂದು ಮಾತಾದರೂ ಹೇಳಲಿಲ್ಲ.