1 Kings 18:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎರಡು ಹೋರಿಗಳನ್ನು ತನ್ನಿ. ಬಾಳನ ಪ್ರವಾದಿಗಳು ಒಂದು ಹೋರಿಯನ್ನು ತೆಗೆದುಕೊಳ್ಳಲಿ. ಅವರು ಅದನ್ನು ಕೊಂದು, ತುಂಡುತುಂಡಾಗಿ ಕತ್ತರಿಸಲಿ. ನಂತರ ಅವರು ಆ ಮಾಂಸವನ್ನು ಸೌದೆಯ ಮೇಲಿಡಲಿ. ಆದರೆ ಬೆಂಕಿಯನ್ನು ಹೊತ್ತಿಸುವುದು ಬೇಡ. ಆಗ ನಾನು ಮತ್ತೊಂದು ಹೋರಿಯನ್ನು ಅವರಂತೆಯೇ ಕತ್ತರಿಸುವೆನು. ನಾನೂ ಬೆಂಕಿಯನ್ನು ಹೊತ್ತಿಸುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಎರಡು ಹೋರಿಗಳನ್ನು ನಮ್ಮ ಬಳಿಗೆ ತರಲಿ ಅವುಗಳಲ್ಲಿ ಒಂದನ್ನು ಆರಿಸಿಕೊಂಡು ಕಡಿದು, ತುಂಡು ಮಾಡಿ, ಕಟ್ಟಿಗೆಯ ಮೇಲಿಡಲಿ. ಆದರೆ ಬೆಂಕಿಹೊತ್ತಿಸಬಾರದು. ನಾನೂ ಇನ್ನೊಂದನ್ನು ಹಾಗೆಯೇ ಮಾಡಿ ಬೆಂಕಿಹೊತ್ತಿಸದೆ ಕಟ್ಟಿಗೆಯ ಮೇಲಿಡುವೆನು
Kannada BSI Bible 2016
ಈಗ ಎರಡು ಹೋರಿಗಳನ್ನು ಅವರು ನಮಗೆ ಕೊಡಲಿ; ಒಂದು ಹೋರಿಯನ್ನು ಅವರು ಆದು ಕೊಂಡು ಅದನ್ನು ತುಂಡು ತುಂಡಾಗಿ ಕಡಿದು ಬೆಂಕಿ ಹಾಕದೆ ಕಟ್ಟಿಗೆಗಳ ಮೇಲೆ ಇಡಲಿ. ನಾನು ಇನ್ನೊಂದು ಹೋರಿಯನ್ನು ಹಾಗೆಯೇ ಮಾಡಿ ಬೆಂಕಿ ಹಾಕದೆ ಕಟ್ಟಿಗೆಗಳ ಮೇಲೆ ಇಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಎರಡು ಹೋರಿಗಳನ್ನು ನಮ್ಮ ಬಳಿಗೆ ತರಲಿ, ಅವುಗಳಲ್ಲೊಂದನ್ನು ಆರಿಸಿಕೊಂಡು ಕಡಿದು ತುಂಡುಮಾಡಿ ಕಟ್ಟಿಗೆಯ ಮೇಲಿಡಲಿ; ಆದರೆ ಬೆಂಕಿಹೊತ್ತಿಸಬಾರದು. ನಾನೂ ಇನ್ನೊಂದನ್ನು ಹಾಗೆಯೇ ಮಾಡಿ ಬೆಂಕಿ ಹೊತ್ತಿಸದೆ ಕಟ್ಟಿಗೆಯ ಮೇಲಿಡುವೆನು.
Kannada Bible (KNCL) BSI 2016
ಅವರು ಎರಡು ಹೋರಿಗಳನ್ನು ನಮ್ಮ ಬಳಿಗೆ ತರಲಿ; ಅವುಗಳಲ್ಲೊಂದನ್ನು ಆರಿಸಿಕೊಂಡು, ಕಡಿದು ತುಂಡುಮಾಡಿ ಕಟ್ಟಿಗೆಯ ಮೇಲಿಡಲಿ; ಆದರೆ ಬೆಂಕಿ ಹೊತ್ತಿಸಬಾರದು. ನಾನೂ ಇನ್ನೊಂದು ಹೋರಿಯನ್ನು ಹಾಗೆಯೇ ಕಡಿದು ಬೆಂಕಿ ಹೊತ್ತಿಸದೆ ಕಟ್ಟಿಗೆಯ ಮೇಲಿಡುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಗ ಎರಡು ಹೋರಿಗಳನ್ನು ಅವರು ನಮಗೆ ಕೊಡಲಿ. ಒಂದು ಹೋರಿಯನ್ನು ಅವರು ಆಯ್ದುಕೊಂಡು, ಅದನ್ನು ತುಂಡುತುಂಡಾಗಿ ಕಡಿದು, ಬೆಂಕಿ ಹಾಕದೆ, ಕಟ್ಟಿಗೆಗಳ ಮೇಲೆ ಇಡಲಿ. ನಾನು ಇನ್ನೊಂದು ಹೋರಿಯನ್ನು ಹಾಗೆ ಮಾಡಿ, ಬೆಂಕಿ ಹಾಕದೆ ಕಟ್ಟಿಗೆಗಳ ಮೇಲೆ ಇಡುವೆನು.