1 Kings 18:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಂತರ ಎಲೀಯನು ಬಾಳನ ಪ್ರವಾದಿಗಳಿಗೆ, “ನಿಮ್ಮಲ್ಲಿ ಬಹು ಜನರು ಇರುವುದರಿಂದ ಮೊದಲು ನೀವೇ ಹೋಗಿ ನಿಮ್ಮ ಹೋರಿಯನ್ನು ಆರಿಸಿಕೊಂಡು ಅದನ್ನು ಸಿದ್ಧಪಡಿಸಿ. ನಿಮ್ಮ ದೇವರಿಗೆ ಪ್ರಾರ್ಥಿಸಿ. ಆದರೆ ನೀವು ಬೆಂಕಿಯನ್ನು ಹೊತ್ತಿಸಬೇಡಿ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವನು ಬಾಳನ ಪ್ರವಾದಿಗಳಿಗೆ, “ನೀವು ಹೆಚ್ಚು ಜನ ಇರುವುದರಿಂದ ಮೊದಲು ನೀವೇ ಒಂದು ಹೋರಿಯನ್ನು ಆರಿಸಿಕೊಂಡು ಅದನ್ನು ಸಿದ್ಧಪಡಿಸಿ, ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ. ಆದರೆ ಬೆಂಕಿಯನ್ನು ಹೊತ್ತಿಸಬಾರದು” ಅಂದನು.
Kannada BSI Bible 2016
ಅದಕ್ಕೆ ಜನರೆಲ್ಲರು ಪ್ರತ್ಯುತ್ತರ ವಾಗಿ--ಈ ಮಾತು ಒಳ್ಳೇದು ಅಂದರು. ಆಗ ಎಲೀ ಯನು ಬಾಳನ ಪ್ರವಾದಿಗಳಿಗೆ--ನೀವು ಅನೇಕರಾಗಿ ರುವದರಿಂದ ಒಂದು ಹೋರಿಯನ್ನು ಆದುಕೊಂಡು ಅದನ್ನು ಮೊದಲು ಸಿದ್ಧಮಾಡಿ ನಿಮ್ಮ ದೇವರುಗಳ ಹೆಸರನ್ನು ಕರೆಯಿರಿ; ಆದರೆ ಬೆಂಕಿಯನ್ನು ಹಾಕದೆ ಇರ್ರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅವನು ಬಾಳನ ಪ್ರವಾದಿಗಳಿಗೆ - ನೀವು ಹೆಚ್ಚು ಮಂದಿ ಇರುವದರಿಂದ ಮೊದಲು ನೀವೇ ಒಂದು ಹೋರಿಯನ್ನು ಆರಿಸಿಕೊಂಡು ಅದನ್ನು ಸಿದ್ಧಪಡಿಸಿ ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ; ಆದರೆ ಬೆಂಕಿಯನ್ನು ಹೊತ್ತಿಸಕೂಡದು ಅಂದನು.
Kannada Bible (KNCL) BSI 2016
ಆಗ ಎಲೀಯನು ಬಾಳನ ಪ್ರವಾದಿಗಳಿಗೆ, “ನೀವು ಹೆಚ್ಚುಮಂದಿ ಇರುವುದರಿಂದ ಮೊದಲು ನೀವೇ ಒಂದು ಹೋರಿಯನ್ನು ಆರಿಸಿಕೊಂಡು, ಅದನ್ನು ಸಿದ್ಧಪಡಿಸಿ, ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ; ಆದರೆ ಬೆಂಕಿಯನ್ನು ಹೊತ್ತಿಸಕೂಡದು,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಎಲೀಯನು ಬಾಳನ ಪ್ರವಾದಿಗಳಿಗೆ, “ನೀವು ಅನೇಕರಾಗಿರುವುದರಿಂದ ಒಂದು ಹೋರಿಯನ್ನು ಆಯ್ದುಕೊಂಡು, ಅದನ್ನು ಮೊದಲು ಸಿದ್ಧಮಾಡಿ, ನಿಮ್ಮ ದೇವರುಗಳ ಹೆಸರನ್ನು ಕರೆಯಿರಿ. ಆದರೆ ಬೆಂಕಿಯನ್ನು ಹೊತ್ತಿಸಬೇಡಿರಿ,” ಎಂದನು.