1 Kings 18:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮಧ್ಯಾಹ್ನವಾದಾಗ ಎಲೀಯನು ಅವರನ್ನು ಅಪಹಾಸ್ಯ ಮಾಡಲಾರಂಭಿಸಿದನು. ಎಲೀಯನು, “ಬಾಳನು ನಿಜವಾದ ದೇವರಾಗಿದ್ದರೆ, ನೀವು ಮತ್ತಷ್ಟು ಗಟ್ಟಿಯಾಗಿ ಪ್ರಾರ್ಥಿಸಿ! ಬಹುಶಃ ಅವನು ಯೋಚನಾನಿರತನಾಗಿರಬಹುದು! ಅಥವಾ ಕಾರ್ಯನಿರತನಾಗಿರಬಹುದು! ಅಥವಾ ಸಂಚಾರನಿರತನಾಗಿರಬಹುದು! ಅಥವಾ ನಿದ್ರಾಮಗ್ನನಾಗಿರಬಹುದು! ನೀವು ಮತ್ತಷ್ಟು ಗಟ್ಟಿಯಾಗಿ ಪ್ರಾರ್ಥಿಸಿ, ಅವನನ್ನು ಎಚ್ಚರಗೊಳಿಸಿ!” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಧ್ಯಾಹ್ನವಾದನಂತರ ಎಲೀಯನು ಅವರನ್ನು ಪರಿಹಾಸ್ಯ ಮಾಡಿ, “ಗಟ್ಟಿಯಾಗಿ ಕೂಗಿರಿ, ಅವನು ದೇವರಾಗಿರುತ್ತಾನಲ್ಲಾ. ಈಗ ಒಂದು ವೇಳೆ ಅವನು ಧ್ಯಾನದಲ್ಲಿರಬಹುದು, ಇಲ್ಲವೇ ಯಾವುದೋ ಕೆಲಸದಲ್ಲಿ ಅಥವಾ ಪ್ರಯಾಣದಲ್ಲಿ ಇರಬೇಕು. ಅದೂ ಇಲ್ಲದಿದ್ದರೆ ನಿದ್ರೆಮಾಡುತ್ತಿದ್ದಾನು, ಎಚ್ಚರವಾಗಬೇಕು” ಎಂದು ಹೇಳಿದನು.
Kannada BSI Bible 2016
ಮಧ್ಯಾಹ್ನದಲ್ಲಿ ಎಲೀಯನು ಅವ ರನ್ನು ಗೇಲಿಮಾಡಿ ಅವರಿಗೆ--ದೊಡ್ಡ ಶಬ್ದದಿಂದ ಕೂಗಿರಿ, ಯಾಕಂದರೆ ಅವನು ಒಬ್ಬ ದೇವರು; ಇಲ್ಲವೆ ಮಾತನಾಡುತ್ತಿದ್ದಾನು; ಇಲ್ಲವೆ ಹಿಂದಟ್ಟುತ್ತಿದ್ದಾನು.; ಇಲ್ಲವೆ ಪ್ರಯಾಣದಲ್ಲಿದ್ದಾನು; ಇಲ್ಲವೆ ಅವನು ನಿದ್ರೆ ಮಾಡುತ್ತಿದ್ದಾನು; ಈಗ ಅವನು ಎಚ್ಚರಿಸಲ್ಪಡಬೇಕು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಧ್ಯಾಹ್ನವಾದನಂತರ ಎಲೀಯನು ಅವರನ್ನು ಪರಿಹಾಸ್ಯಮಾಡಿ - ಗಟ್ಟಿಯಾಗಿ ಕೂಗಿರಿ; ಅವನು ದೇವರಾಗಿರುತ್ತಾನಲ್ಲಾ! ಈಗ ಒಂದು ವೇಳೆ ಅವನು ಧ್ಯಾನದಲ್ಲಿರಬಹುದು; ಇಲ್ಲವೆ ಯಾವದೋ ಕೆಲಸದಲ್ಲಿ ಅಥವಾ ಪ್ರಯಾಣದಲ್ಲಿ ಇರಬೇಕು. ಅದೂ ಇಲ್ಲದಿದ್ದರೆ ನಿದ್ರೆಮಾಡುತ್ತಿದ್ದಾನು, ಎಚ್ಚರವಾಗಬೇಕು ಎಂದು ಹೇಳಿದನು.
Kannada Bible (KNCL) BSI 2016
ಮಧ್ಯಾಹ್ನವಾದನಂತರ ಎಲೀಯನು ಅವರನ್ನು ಪರಿಹಾಸ್ಯ ಮಾಡಿದನು: “ಗಟ್ಟಿಯಾಗಿ ಕೂಗಿರಿ; ಅವನು ದೇವರಲ್ಲವೆ? ಈಗ ಒಂದು ವೇಳೆ ಅವನು ಧ್ಯಾನದಲ್ಲಿ ಇರಬಹುದು; ಇಲ್ಲವೇ, ಯಾವುದೋ ಕೆಲಸದಲ್ಲಿ ಅಥವಾ ಪ್ರಯಾಣದಲ್ಲಿ ಇರಬೇಕು; ಇಲ್ಲದಿದ್ದರೆ, ನಿದ್ರೆಮಾಡುತ್ತಿರಬೇಕು; ಎಚ್ಚರವಾಗಲಿ,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಧ್ಯಾಹ್ನದಲ್ಲಿ ಎಲೀಯನು ಅವರನ್ನು ಗೇಲಿಮಾಡಿ ಅವರಿಗೆ, “ದೊಡ್ಡ ಶಬ್ದದಿಂದ ಕೂಗಿರಿ, ಏಕೆಂದರೆ ಅವನು ಒಬ್ಬ ದೇವರಲ್ಲವೇ? ಒಂದು ವೇಳೆ ಅವನು ಧ್ಯಾನದಲ್ಲಿರಬಹುದು; ಇಲ್ಲವೆ ಯಾವುದೋ ಕೆಲಸದಲ್ಲಿರಬಹುದು; ಇಲ್ಲವೆ ಪ್ರಯಾಣದಲ್ಲಿದ್ದಾನೆ; ಇಲ್ಲವೆ ಅವನು ನಿದ್ದೆಯಲ್ಲಿದ್ದಾನೆ; ಈಗ ಅವನು ಎಚ್ಚರವಾಗಬೇಕು,” ಎಂದನು.