1 Kings 18:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮಧ್ಯಾಹ್ನದ ಸಮಯವು ಮೀರುತ್ತಾ ಬಂದರೂ ಬೆಂಕಿಯು ಹೊತ್ತಿಕೊಳ್ಳಲೇ ಇಲ್ಲ. ಸಾಯಂಕಾಲದ ಯಜ್ಞಗಳನ್ನು ಅರ್ಪಿಸುವ ಸಮಯ ಬರುವ ತನಕ ಪ್ರವಾದಿಗಳು ಗಟ್ಟಿಯಾಗಿ ಕೂಗುತ್ತಲೇ ಇದ್ದರು. ಆದರೂ ಬಾಳನಿಂದ ಉತ್ತರವೇ ಬರಲಿಲ್ಲ. ಯಾವ ಶಬ್ದವೂ ಆಗಲಿಲ್ಲ; ಅವರ ಕೂಗಾಟವನ್ನು ಯಾರೂ ಲಕ್ಷಿಸಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಧ್ಯಾಹ್ನದಿಂದ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಪರವಶರಾಗಿ ಕೂಗುತ್ತಾ ಇದ್ದರು. ಆದರೂ ಆಕಾಶವಾಣಿಯಾಗಲಿಲ್ಲ. ಯಾರೂ ಅವರಿಗೆ ಉತ್ತರಕೊಡಲಿಲ್ಲ ಅವರನ್ನು ಲಕ್ಷಿಸಲಿಲ್ಲ.
Kannada BSI Bible 2016
ಮಧ್ಯಾಹ್ನವಾದ ತರುವಾಯ ಸಾಯಂಕಾಲದ ಬಲಿ ಅರ್ಪಿಸಲ್ಪಡುವ ವೇಳೆಯ ವರೆಗೂ ಪ್ರವಾದಿಸುತ್ತಾ ಇದ್ದರು. ಆದರೆ ಶಬ್ದವಾ ದರೂ ಪ್ರತ್ಯುತ್ತರಕೊಡುವವನಾದರೂ ಲಕ್ಷಿಸುವವ ನಾದರೂ ಇರಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಧ್ಯಾಹ್ನದಿಂದ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಪರವಶರಾಗಿ ಕೂಗುತ್ತಾ ಇದ್ದರು. ಆದರೂ ಆಕಾಶವಾಣಿಯಾಗಲಿಲ್ಲ; ಯಾವನೂ ಅವರಿಗೆ ಉತ್ತರಕೊಡಲಿಲ್ಲ, ಅವರನ್ನು ಲಕ್ಷಿಸಲಿಲ್ಲ.
Kannada Bible (KNCL) BSI 2016
ಮಧ್ಯಾಹ್ನದಿಂದ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಪರವಶರಾಗಿ ಕೂಗುತ್ತಿದ್ದರು. ಆದರೂ ಯಾವ ವಾಣಿಯೂ ಕೇಳಿಸಲಿಲ್ಲ; ಯಾವನೂ ಅವರಿಗೆ ಉತ್ತರಕೊಡಲಿಲ್ಲ; ಅವರನ್ನು ಯಾವನೂ ಲಕ್ಷಿಸಲೂ ಇಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಧ್ಯಾಹ್ನವಾದ ತರುವಾಯ ಸಾಯಂಕಾಲದ ಬಲಿ ಅರ್ಪಿಸುವ ವೇಳೆಯವರೆಗೂ ಪರವಶರಾಗಿ ಕೂಗುತ್ತಾ ಇದ್ದರು. ಆದರೆ ಶಬ್ದವಾದರೂ, ಉತ್ತರ ಕೊಡುವವನಾದರೂ, ಲಕ್ಷಿಸುವವನಾದರೂ ಇರಲಿಲ್ಲ.