1 Kings 18:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಎಲೀಯನು ಜನರೆಲ್ಲರಿಗೂ, “ಈಗ ನನ್ನ ಬಳಿಗೆ ಬನ್ನಿ” ಎಂದನು. ಅವನ ಸುತ್ತಲೂ ಜನರೆಲ್ಲರೂ ಒಟ್ಟುಗೂಡಿದರು. ಯೆಹೋವನ ಯಜ್ಞವೇದಿಕೆಯು ಒಡೆದುಹೋಗಿತ್ತು. ಎಲೀಯನು ಅದನ್ನು ಸರಿಪಡಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಎಲೀಯನು ಎಲ್ಲಾ ಜನರನ್ನು ಹತ್ತಿರಕ್ಕೆ ಕರೆಯಲು ಅವರು ಬಂದರು. ಅವನು ಹಾಳಾಗಿದ್ದ ಅಲ್ಲಿ ಯೆಹೋವನ ಯಜ್ಞವೇದಿಯನ್ನು ತಿರುಗಿ ಕಟ್ಟಿಸಿದನು.
Kannada BSI Bible 2016
ಆಗ ಎಲೀಯನು ಸಮಸ್ತ ಜನರಿಗೆ--ನನ್ನ ಬಳಿಗೆ ಬನ್ನಿರಿ ಅಂದನು; ಜನರೆಲ್ಲರು ಅವನ ಬಳಿಗೆ ಬಂದರು. ಕಿತ್ತುಹಾಕಲ್ಪಟ್ಟ ಕರ್ತನ ಬಲಿಪೀಠವನ್ನು ಅವನು ದುರಸ್ತು ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಂತರ ಎಲೀಯನು ಎಲ್ಲಾ ಜನರನ್ನು ಹತ್ತಿರಕ್ಕೆ ಕರೆಯಲು ಅವರು ಬಂದರು. ಅವನು ಹಾಳಾಗಿದ್ದ ಅಲ್ಲಿನ ಯೆಹೋವವೇದಿಯನ್ನು ತಿರಿಗಿ ಕಟ್ಟಿಸಿದನು.
Kannada Bible (KNCL) BSI 2016
ಅನಂತರ ಎಲೀಯನು ಜನರೆಲ್ಲರನ್ನು ಹತ್ತಿರಕ್ಕೆ ಕರೆದನು; ಅವರು ಬಂದರು. ಹಾಳಾಗಿದ್ದ ಅಲ್ಲಿನ ಸರ್ವೇಶ್ವರನ ಪೀಠವನ್ನು ದುರಸ್ತು ಮಾಡಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಎಲೀಯನು ಸಮಸ್ತ ಜನರಿಗೂ, “ನನ್ನ ಬಳಿಗೆ ಬನ್ನಿರಿ,” ಎಂದನು. ಜನರೆಲ್ಲರು ಅವನ ಬಳಿಗೆ ಬಂದರು. ಕಿತ್ತು ಹಾಕಿದ ಯೆಹೋವ ದೇವರ ಬಲಿಪೀಠವನ್ನು ಅವನು ದುರಸ್ತಿ ಮಾಡಿದನು.