1 Kings 18:34 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಲೀಯನು, “ನಾಲ್ಕು ಕೊಡಗಳಲ್ಲಿ ನೀರನ್ನು ತುಂಬಿಸಿ. ಆ ಮಾಂಸದ ತುಂಡುಗಳ ಮೇಲೆ ಮತ್ತು ಸೌದೆಯ ಮೇಲೆ ಆ ನೀರನ್ನು ಸುರಿಯಿರಿ” ಎಂದು ಹೇಳಿದನು. ಎಲೀಯನು, “ಮತ್ತೆ ಅದೇ ರೀತಿ ಮಾಡಿ” ಎಂದನು, ಅವನು, “ಮೂರನೆಯ ಸಲ ಅದೇ ರೀತಿ ಮಾಡಿ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ತೆಗೆದುಕೊಂಡು ಬರಲು, “ಇನ್ನೊಂದು ಸಾರಿ ತನ್ನಿರಿ” ಎಂದು ಹೇಳಿದನು. ತಿರುಗಿ ತಂದರು. ಅವನು ಮೂರನೆಯ ಸಾರಿ ಅದೇ ಪ್ರಕಾರವಾಗಿ ಆಜ್ಞಾಪಿಸಿಲು ಅವರು ಮತ್ತೊಮ್ಮೆ ತಂದು ಸುರಿದರು
Kannada BSI Bible 2016
ಎರಡನೇ ಸಾರಿ ಹೊಯ್ಯಿರಿ ಅಂದನು. ಮೂರನೇ ಸಾರಿ ಹೊಯ್ಯಿರಿ ಅಂದನು; ಮೂರನೇ ಸಾರಿಯೂ ಹೊಯ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ತೆಗೆದುಕೊಂಡು ಬರಲು ಇನ್ನೊಂದು ಸಾರಿ ತನ್ನಿರಿ ಎಂದು ಹೇಳಿದನು. ತಿರಿಗಿ ತಂದರು. ಅವನು ಮೂರನೆಯ ಸಾರಿ ಅದೇ ಪ್ರಕಾರವಾಗಿ ಆಜ್ಞಾಪಿಸಲು ಅವರು ಮತ್ತೊಮ್ಮೆ ತಂದು ಸುರಿದರು.
Kannada Bible (KNCL) BSI 2016
ಅವರು ಅಂತೆಯೇ ತೆಗೆದುಕೊಂಡು ಬಂದರು. “ಇನ್ನೊಂದು ಸಾರಿ ತನ್ನಿ,” ಎಂದು ಹೇಳಿದನು. ಅವರು ಇನ್ನೊಮ್ಮೆ ತಂದರು. ಅವನು ಮೂರನೆಯ ಸಾರಿ ಅದೇ ಪ್ರಕಾರ ಆಜ್ಞಾಪಿಸಲು ಅವರು ಮತ್ತೊಮ್ಮೆ ತಂದು ಸುರಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಅವನು ಹೇಳಿದಂತೆ ಮಾಡಿದರು. ಆಗ ಎಲೀಯನು, “ಎರಡನೆಯ ಸಾರಿ ಹೊಯ್ಯಿರಿ,” ಎಂದನು. ಅವರು ಎರಡನೆಯ ಸಾರಿಯೂ ಹೊಯ್ದರು. ಮೂರನೆಯ ಸಾರಿ, “ಹೊಯ್ಯಿರಿ,” ಎಂದನು. ಮೂರನೆಯ ಸಾರಿಯೂ ಹೊಯ್ದರು.