1 Kings 18:36 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದು ಮಧ್ಯಾಹ್ನದ ಯಜ್ಞಗಳನ್ನು ಅರ್ಪಿಸುವ ಸಮಯ. ಪ್ರವಾದಿಯಾದ ಎಲೀಯನು ಯಜ್ಞವೇದಿಕೆಯ ಹತ್ತಿರಕ್ಕೆ ಹೋಗಿ, “ಅಬ್ರಹಾಮನ, ಇಸಾಕನ ಮತ್ತು ಯಾಕೋಬನ ದೇವರಾದ ಯೆಹೋವನೇ, ನೀನು ಇಸ್ರೇಲಿನಲ್ಲಿರುವ ದೇವರೆಂಬುದನ್ನು ರುಜುವಾತುಪಡಿಸಲು ನಾನೀಗ ನಿನ್ನನ್ನು ಪ್ರಾರ್ಥಿಸುತ್ತಿದ್ದೇನೆ. ನಾನು ನಿನ್ನ ಸೇವಕನೆಂಬುದನ್ನೂ ನೀನು ನಿರೂಪಿಸು. ಈ ಕಾರ್ಯಗಳನ್ನೆಲ್ಲಾ ನಾನು ಮಾಡುವಂತೆ ನೀನು ಆಜ್ಞಾಪಿಸಿದೆ ಎನ್ನುವುದನ್ನೂ ಈ ಜನರಿಗೆ ತೋರಿಸು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಂಧ್ಯಾನೈವೇದ್ಯದ ಹೊತ್ತಿಗೆ ಪ್ರವಾದಿಯಾದ ಎಲೀಯನು ಯಜ್ಞವೇದಿಯ ಹತ್ತಿರ ಬಂದು, “ಅಬ್ರಹಾಮ, ಇಸಾಕ ಇಸ್ರಾಯೇಲರ ದೇವರೇ, ಯೆಹೋವನೇ, ನೀನೊಬ್ಬನೇ ಇಸ್ರಾಯೇಲರ ದೇವರಾಗಿರುತ್ತೀ ಎಂಬುದನ್ನೂ, ನಾನು ನಿನ್ನ ಸೇವಕನಾಗಿರುತ್ತೇನೆ ಎಂಬುದನ್ನೂ ಮತ್ತು ಇದನ್ನೆಲ್ಲಾ ನಿನ್ನ ಅಪ್ಪಣೆಯ ಮೇರೆಗೆ ಮಾಡಿದೆನೆಂಬುದನ್ನೂ ಈ ಹೊತ್ತು ತೋರಿಸಿಕೊಡು.
Kannada BSI Bible 2016
ಸಾಯಂಕಾಲದ ಬಲಿಯನ್ನು ಅರ್ಪಿಸುವ ವೇಳೆ ಯಲ್ಲಿ ಪ್ರವಾದಿಯಾದ ಎಲೀಯನು ಸವಿಾಪಕ್ಕೆ ಬಂದು--ಅಬ್ರಹಾಮನಿಗೂ ಇಸಾಕನಿಗೂ ಇಸ್ರಾ ಯೇಲಿಗೂ ದೇವರಾದ ಕರ್ತನೇ, ಇಸ್ರಾಯೇಲಿನಲ್ಲಿ ನೀನು ದೇವರೆಂದೂ ನಾನು ನಿನ್ನ ಸೇವಕನೆಂದೂ ನಾನು ಈ ಕಾರ್ಯಗಳನ್ನೆಲ್ಲಾ ನಿನ್ನ ಮಾತಿನ ಹಾಗೆಯೇ ಮಾಡಿದೆನೆಂದೂ ಇಂದು ತಿಳಿಯಲ್ಪಡಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಂಧ್ಯಾನೈವೇದ್ಯದ ಹೊತ್ತಿಗೆ ಪ್ರವಾದಿಯಾದ ಎಲೀಯನು ವೇದಿಯ ಹತ್ತಿರ ಬಂದು - ಅಬ್ರಹಾಮ್ ಇಸಾಕ್ ಇಸ್ರಾಯೇಲ್ಯರ ದೇವರೇ, ಯೆಹೋವನೇ, ನೀನೋಬ್ಬನೇ ಇಸ್ರಾಯೇಲ್ಯರ ದೇವರಾಗಿರುತ್ತೀ ಎಂಬದನ್ನೂ ನಾನು ನಿನ್ನ ಸೇವಕನಾಗಿರುತ್ತೇನೆಂಬದನ್ನೂ ಇದನ್ನೆಲ್ಲಾ ನಿನ್ನ ಅಪ್ಪಣೆಯ ಮೇರೆಗೆ ಮಾಡಿದೆನೆಂಬದನ್ನೂ ಈಹೊತ್ತು ತೋರಿಸಿ ಕೊಡು.
Kannada Bible (KNCL) BSI 2016
ಸಂಧ್ಯಾನೈವೇದ್ಯದ ಹೊತ್ತಿಗೆ, ಪ್ರವಾದಿ ಎಲೀಯನು ಪೀಠದ ಹತ್ತಿರ ಬಂದು, “ಅಬ್ರಹಾಮ್, ಇಸಾಕ್, ಇಸ್ರಯೇಲರ ದೇವರೇ, ಸರ್ವೇಶ್ವರಾ, ನೀವೊಬ್ಬರೇ ಇಸ್ರಯೇಲರ ದೇವರಾಗಿರುತ್ತೀರಿ ಎಂಬುದನ್ನು, ನಾನು ನಿನ್ನ ದಾಸನಾಗಿರುತ್ತೇನೆಂಬುದನ್ನು ಹಾಗು ಇದನ್ನೆಲ್ಲಾ ನಿಮ್ಮ ಅಪ್ಪಣೆಯ ಮೇರೆಗೆ ಮಾಡಿದೆನೆಂಬುದನ್ನು ಈ ದಿನ ತೋರಿಸಿಕೊಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಾಯಂಕಾಲದ ಬಲಿಯನ್ನು ಅರ್ಪಿಸುವ ವೇಳೆಯಲ್ಲಿ ಪ್ರವಾದಿಯಾದ ಎಲೀಯನು ಬಲಿಪೀಠದ ಸಮೀಪಕ್ಕೆ ಬಂದು, “ಅಬ್ರಹಾಮನಿಗೂ, ಇಸಾಕನಿಗೂ, ಇಸ್ರಾಯೇಲಿಗೂ ದೇವರಾದ ಯೆಹೋವ ದೇವರೇ, ಇಸ್ರಾಯೇಲಿನಲ್ಲಿ ನೀವೇ ದೇವರೆಂದೂ, ನಾನು ನಿಮ್ಮ ಸೇವಕನೆಂದೂ, ನಾನು ಈ ಕಾರ್ಯಗಳನ್ನೆಲ್ಲಾ ನಿಮ್ಮ ಮಾತಿನ ಹಾಗೆಯೇ ಮಾಡಿದ್ದೇನೆಂದೂ ಇಂದು ತೋರಿಸಿಕೊಡಿರಿ.