1 Kings 18:37 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನೇ, ನನ್ನ ಪ್ರಾರ್ಥನೆಗೆ ಕಿವಿಗೊಡು. ಯೆಹೋವನೇ, ನೀನು ದೇವರೆಂಬುದನ್ನು ಈ ಜನರಿಗೆಲ್ಲ ತೋರಿಸು. ಈ ಜನರನ್ನೆಲ್ಲ ಮತ್ತೆ ನೀನು ನಿನ್ನ ಬಳಿಗೆ ತರುತ್ತಿರುವೆ ಎಂಬುದನ್ನೂ ಈ ಜನರು ತಿಳಿದುಕೊಳ್ಳಲಿ” ಎಂದು ಪ್ರಾರ್ಥಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಿವಿಗೊಡು, ಯೆಹೋವನೇ ಕಿವಿಗೊಡು, ಯೆಹೋವನಾದ ನೀನೊಬ್ಬನೇ ದೇವರೂ! ಈ ಜನರ ಮನಸ್ಸನ್ನು ನಿನ್ನ ಕಡೆಗೆ ತಿರುಗಿಸಿಕೊಳ್ಳುವವನೂ ನೀನೇ ಆಗಿರುತ್ತೀ ಎಂಬುದನ್ನು ಇವರಿಗೆ ತಿಳಿಯಪಡಿಸು” ಎಂದು ಪ್ರಾರ್ಥಿಸಿದನು.
Kannada BSI Bible 2016
ನೀನು ದೇವರಾದ ಕರ್ತನೆಂದೂ ನೀನು ಅವರ ಹೃದಯವನ್ನು ಮರಳಿ ತಿರಿಗಿಸುತ್ತಿ ಎಂದೂ ಈ ಜನವು ತಿಳಿಯುವ ಹಾಗೆ ನನಗೆ ಉತ್ತರಕೊಡು, ಓ ಕರ್ತನೇ, ನನಗೆ ಉತ್ತರಕೊಡು ಎಂದು ಬೇಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಿವಿಗೊಡು; ಯೆಹೋವನೇ, ಕಿವಿಗೊಡು; ಯೆಹೋವನಾದ ನೀನೊಬ್ಬನೇ ದೇವರೂ ಈ ಜನರ ಮನಸ್ಸನ್ನು ನಿನ್ನ ಕಡೆಗೆ ತಿರುಗಿಸಿಕೊಳ್ಳುವವನೂ ಆಗಿರುತ್ತೀ ಎಂಬದನ್ನು ಇವರಿಗೆ ತಿಳಿಯಪಡಿಸು ಎಂದು ಪ್ರಾರ್ಥಿಸಿದನು.
Kannada Bible (KNCL) BSI 2016
ನಮಗೆ ಕಿವಿಗೊಡಿ; ಸರ್ವೇಶ್ವರಾ ನಮಗೆ ಕಿವಿಗೊಡಿ; ಸರ್ವೇಶ್ವರನಾದ ನೀವೊಬ್ಬರೇ ದೇವರು ಹಾಗು ಈ ಜನರ ಮನಸ್ಸನ್ನು ನಿಮ್ಮಕಡೆಗೆ ತಿರುಗಿಸಿಕೊಳ್ಳುವವರು ಆಗಿರುತ್ತೀರಿ ಎಂಬುದನ್ನು ಇವರಿಗೆ ತಿಳಿಯಪಡಿಸಿ,” ಎಂದು ಪ್ರಾರ್ಥಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ದೇವರಾದ ಯೆಹೋವ ದೇವರೆಂದೂ, ನೀವು ಅವರ ಹೃದಯವನ್ನು ತಿರುಗಿಸಿದ್ದೀರೆಂದೂ ಈ ಜನರು ತಿಳಿಯುವ ಹಾಗೆ ನನಗೆ ಉತ್ತರಕೊಡಿರಿ. ಯೆಹೋವ ದೇವರೇ, ನನಗೆ ಉತ್ತರಕೊಡಿರಿ” ಎಂದು ಬೇಡಿದನು.