1 Kings 18:38 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕೂಡಲೇ ಯೆಹೋವನ ಕಡೆಯಿಂದ ಬೆಂಕಿಬಿದ್ದು ಯಜ್ಞಗಳನ್ನು, ಸೌದೆಯನ್ನು, ಕಲ್ಲುಗಳನ್ನು ಮತ್ತು ಯಜ್ಞವೇದಿಕೆಯ ಸುತ್ತಲಿನ ಮಣ್ಣನ್ನೆಲ್ಲ ದಹಿಸಿತು. ಆ ಹಳ್ಳದಲ್ಲಿದ್ದ ನೀರನ್ನೆಲ್ಲ ಬೆಂಕಿಯು ದಹಿಸಿ ಒಣಗಿಸಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೂಡಲೇ ಯೆಹೋವನ ಕಡೆಯಿಂದ ಬೆಂಕಿಬಿದ್ದು ಯಜ್ಞಮಾಂಸವನ್ನೂ, ಕಟ್ಟಿಗೆ, ಕಲ್ಲು ಮಣ್ಣುಗಳನ್ನೂ ದಹಿಸಿಬಿಟ್ಟು ಕಾಲುವೆಯಲ್ಲಿದ್ದ ನೀರನ್ನೆಲ್ಲಾ ಹೀರಿಬಿಟ್ಟಿತು.
Kannada BSI Bible 2016
ಆಗ ಕರ್ತನ ಬೆಂಕಿಯು ಇಳಿದು ಬಂದು ದಹನಬಲಿಯನ್ನೂ ಕಟ್ಟಿಗೆ ಗಳನ್ನೂ ಕಲ್ಲುಗಳನ್ನೂ ಮಣ್ಣನ್ನೂ ಸುಟ್ಟುಬಿಟ್ಟು ಕಾಲುವೆ ಯಲ್ಲಿದ್ದ ನೀರನ್ನು ಹೀರಿಬಿಟ್ಟಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೂಡಲೆ ಯೆಹೋವನ ಕಡೆಯಿಂದ ಬೆಂಕಿಬಿದ್ದು ಯಜ್ಞಮಾಂಸವನ್ನೂ ಕಟ್ಟಿಗೆಕಲ್ಲು ಮಣ್ಣುಗಳನ್ನೂ ದಹಿಸಿಬಿಟ್ಟು ಕಾಲುವೆಯಲ್ಲಿದ್ದ ನೀರನ್ನೆಲ್ಲಾ ಹೀರಿಬಿಟ್ಟಿತು.
Kannada Bible (KNCL) BSI 2016
ಕೂಡಲೆ ಸರ್ವೇಶ್ವರನ ಕಡೆಯಿಂದ ಬೆಂಕಿ ಇಳಿದುಬಂದು ಬಲಿಮಾಂಸವನ್ನೂ ಕಟ್ಟಿಗೆ ಕಲ್ಲುಮಣ್ಣುಗಳನ್ನೂ ದಹಿಸಿಬಿಟ್ಟಿತು. ಕಾಲುವೆಯಲ್ಲಿದ್ದ ನೀರನ್ನೆಲ್ಲಾ ಹೀರಿಬಿಟ್ಟಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೂಡಲೇ ಯೆಹೋವ ದೇವರ ಬೆಂಕಿಯು ಇಳಿದುಬಂದು, ದಹನಬಲಿಯನ್ನೂ, ಕಟ್ಟಿಗೆಗಳನ್ನೂ, ಕಲ್ಲುಗಳನ್ನೂ, ಮಣ್ಣನ್ನೂ ಸುಟ್ಟುಬಿಟ್ಟು, ಕಾಲುವೆಯಲ್ಲಿದ್ದ ನೀರನ್ನು ಹೀರಿಬಿಟ್ಟಿತು.