1 Kings 18:40 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಎಲೀಯನು, “ಬಾಳನ ಪ್ರವಾದಿಗಳನ್ನು ಹಿಡಿದು ತನ್ನಿ! ಅವರಲ್ಲಿ ಒಬ್ಬರಾದರೂ ತಪ್ಪಿಸಿಕೊಳ್ಳದಂತೆ ನೋಡಿಕೊಳ್ಳಿ!” ಎಂದು ಹೇಳಿದನು. ಪ್ರವಾದಿಗಳನ್ನೆಲ್ಲ ಜನರು ಹಿಡಿದುಕೊಂಡರು. ಎಲೀಯನು ಅವರನ್ನೆಲ್ಲಾ ಕೀಷೋನ್ ಬುಗ್ಗೆಗೆ ಎಳೆದುಕೊಂಡು ಹೋಗಿ ಕೊಂದು ಹಾಕಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಎಲೀಯನು ಅವರಿಗೆ, “ಬಾಳನ ಪ್ರವಾದಿಗಳೆಲ್ಲರನ್ನು ಹಿಡಿಯಿರಿ. ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳಬಾರದು” ಎಂದು ಆಜ್ಞಾಪಿಸಲು ಅವರು ಹಿಡಿದರು. ಅವನು ಅವರನ್ನು ಕೀಷೋನ್ ಹಳ್ಳಕ್ಕೆ ಒಯ್ದು ಅಲ್ಲಿ ಕೊಲ್ಲಿಸಿದನು.
Kannada BSI Bible 2016
ಆಗ ಎಲೀಯನು ಅವರಿಗೆ--ನೀವು ಬಾಳನ ಪ್ರವಾದಿಗಳನ್ನು ಹಿಡಿಯಿರಿ; ಅವರಲ್ಲಿ ಒಬ್ಬನೂ ತಪ್ಪಿಸಿ ಕೊಳ್ಳದೆ ಇರಲಿ ಅಂದನು. ಇವರು ಅವರನ್ನು ಹಿಡಿ ದರು; ಎಲೀಯನು ಅವರನ್ನು ಕೀಷೋನ್‌ಹಳ್ಳದ ಬಳಿಗೆ ತಕ್ಕೊಂಡುಹೋಗಿ ಅಲ್ಲಿ ಅವರನ್ನು ಕೊಂದು ಹಾಕಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಎಲೀಯನು ಅವರಿಗೆ - ಬಾಳನ ಪ್ರವಾದಿಗಳೆಲ್ಲರನ್ನೂ ಹಿಡಿಯಿರಿ; ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳಬಾರದು ಎಂದು ಆಜ್ಞಾಪಿಸಲು ಅವರು ಹಿಡಿದರು. ಅವನು ಅವರನ್ನು ಕೀಷೋನ್‍ಹಳ್ಳಕ್ಕೆ ಒಯ್ದು ಅಲ್ಲಿ ಕೊಲ್ಲಿಸಿದನು.
Kannada Bible (KNCL) BSI 2016
ಆಗ ಎಲೀಯನು ಅವರಿಗೆ, “ಬಾಳನ ಪ್ರವಾದಿಗಳೆಲ್ಲರನ್ನು ಹಿಡಿಯಿರಿ; ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳಬಾರದು,” ಎಂದು ಆಜ್ಞಾಪಿಸಲು ಅವರು ಹಿಡಿದರು. ಅವನು ಅವರನ್ನು ಕೀಷೋನ್ ಹಳ್ಳಕ್ಕೆ ಒಯ್ದು ಕೊಲ್ಲಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಎಲೀಯನು ಅವರಿಗೆ, “ನೀವು ಬಾಳನ ಪ್ರವಾದಿಗಳನ್ನು ಹಿಡಿಯಿರಿ. ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳದೆ ಇರಲಿ,” ಎಂದನು. ಇವರು ಅವರನ್ನು ಹಿಡಿದರು. ಎಲೀಯನು ಅವರನ್ನು ಕೀಷೋನು ಹಳ್ಳದ ಬಳಿಗೆ ತೆಗೆದುಕೊಂಡುಹೋಗಿ ಅಲ್ಲಿ ಅವರನ್ನು ಕೊಂದುಹಾಕಿದನು.