1 Kings 18:44 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಏಳನೆಯ ಸಲ, ಸೇವಕನು ಹಿಂದಿರುಗಿ ಬಂದು, ‘ಒಬ್ಬ ಮನುಷ್ಯನ ಮುಷ್ಟಿ ಗಾತ್ರದ ಚಿಕ್ಕ ಮೋಡವನ್ನು ನಾನು ನೋಡಿದೆನು. ಆ ಮೋಡವು ಸಮುದ್ರದಿಂದ ಬರುತ್ತಿದೆ” ಎಂದನು. ಎಲೀಯನು ಸೇವಕನಿಗೆ, ‘ರಾಜನಾದ ಅಹಾಬನ ಬಳಿಗೆ ಹೋಗಿ, ತನ್ನ ರಥವನ್ನು ಸಿದ್ಧಗೊಳಿಸಿ ಈಗಲೇ ಮನೆಗೆ ಹೋಗುವಂತೆ ಅವನಿಗೆ ಹೇಳು, ಅವನೀಗ ಬಿಟ್ಟುಹೋಗದಿದ್ದರೆ, ಮಳೆಯು ಅವನನ್ನು ತಡೆಯುತ್ತದೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಳನೆಯ ಸಾರಿ ಸೇವಕನು, “ಅಂಗೈಯಷ್ಟು ಚಿಕ್ಕದಾದ ಮೋಡವು ಸಮುದ್ರದಿಂದ ಏರಿ ಬರುತ್ತಿದೆ” ಎಂದು ತಿಳಿಸಿದನು. ಆಗ ಎಲೀಯನು ಅವನಿಗೆ, “ನೀನು ಹೋಗಿ ಅಹಾಬನಿಗೆ, ‘ಬೇಗನೆ ರಥವನ್ನು ಹೂಡಿಸಿಕೊಂಡು ಮಳೆಯು ನಿನ್ನನ್ನು ತಡೆಯದಂತೆ ಬೆಟ್ಟವನ್ನಿಳಿದು ಹೋಗು’ ಎಂದು ಹೇಳು” ಅಂದನು.
Kannada BSI Bible 2016
ಏಳನೇಸಾರಿ ಏನಾಯಿತಂದರೆ, ಇವನು--ಇಗೋ, ಸಮುದ್ರದಲ್ಲಿಂದ ಒಬ್ಬ ಮನು ಷ್ಯನ ಅಂಗೈಯಷ್ಟು ಚಿಕ್ಕ ಮೇಘವು ಏಳುತ್ತದೆ ಅಂದನು. ಆಗ ಅವನು--ನೀನು ಹೋಗಿ ಅಹಾಬನಿಗೆ--ಮಳೆಯು ನಿನ್ನನ್ನು ಆಟಂಕ ಮಾಡದ ಹಾಗೆ ಸಿದ್ಧಮಾಡಿ ಇಳಿದುಹೋಗೆಂದು ಹೇಳು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಏಳನೆಯ ಸಾರಿ ಸೇವಕನು - ಅಂಗೈಯಷ್ಟು ಚಿಕ್ಕದಾದ ಮೋಡವು ಸಮುದ್ರದಿಂದ ಏರಿ ಬರುತ್ತಲಿದೆ ಎಂದು ತಿಳಿಸಿದನು. ಆಗ ಎಲೀಯನು ಅವನಿಗೆ - ನೀನು ಹೋಗಿ ಅಹಾಬನಿಗೆ - ಬೇಗನೆ ರಥವನ್ನು ಹೂಡಿಸಿಕೊಂಡು ಮಳೆಯು ನಿನ್ನನ್ನು ತಡೆಯದಂತೆ ಬೆಟ್ಟವನ್ನಿಳಿದು ಹೋಗು ಎಂದು ಹೇಳು ಅಂದನು.
Kannada Bible (KNCL) BSI 2016
ಏಳನೆಯ ಸಾರಿ ಆ ಸೇವಕನು, “ಅಂಗೈಯಷ್ಟು ಚಿಕ್ಕದಾದ ಮೋಡವು ಸಮುದ್ರದಿಂದ ಏರಿ ಬರುತ್ತಲಿದೆ,” ಎಂದು ತಿಳಿಸಿದನು. ಆಗ ಎಲೀಯನು ಅವನಿಗೆ, “ನೀನು ಹೋಗಿ ಅಹಾಬನಿಗೆ, ‘ಬೇಗನೆ ರಥವನ್ನು ಹೂಡಿಸಿಕೊಂಡು, ಮಳೆಯು ನಿನ್ನನ್ನು ತಡೆಯದಂತೆ ಬೆಟ್ಟವನ್ನಿಳಿದು ಹೋಗು’ ಎಂದು ಹೇಳು,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಳನೆಯ ಸಾರಿ ಇವನು ಹೋಗಿ ನೋಡಿದಾಗ, “ಇಗೋ, ಸಮುದ್ರದಿಂದ ಒಂದು ಮನುಷ್ಯನ ಅಂಗೈಯಷ್ಟು ಚಿಕ್ಕ ಮೇಘವು ಏಳುತ್ತಿದೆ,” ಎಂದನು. ಆಗ, “ನೀನು ಹೋಗಿ ಅಹಾಬನಿಗೆ ಬೇಗನೇ ರಥವನ್ನು ತೆಗೆದುಕೊಂಡು ಮಳೆಯು ನಿನ್ನನ್ನು ತಡೆಯದಂತೆ ಇಳಿದುಹೋಗೆಂದು ಹೇಳು,” ಎಂದನು.