1 Kings 18:45 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸ್ವಲ್ಪ ಹೊತ್ತಿನಲ್ಲಿಯೇ, ಆಕಾಶವು ಕಪ್ಪಾದ ಮೋಡಗಳಿಂದ ಕವಿದುಕೊಂಡಿತು. ಗಾಳಿಯು ಬೀಸಲಾರಂಭಿಸಿತು ಮತ್ತು ಬಿರುಸಾದ ಮಳೆಯು ಸುರಿಯಲಾರಂಭಿಸಿತು. ಅಹಾಬನು ತನ್ನ ರಥವನ್ನೇರಿ, ಇಜ್ರೇಲಿಗೆ ಪ್ರಯಾಣ ಮಾಡಲಾರಂಭಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸ್ವಲ್ಪ ಹೊತ್ತಿನಲ್ಲಿಯೇ ಆಕಾಶವು ಮೋಡಗಾಳಿಗಳಿಂದ ಕಪ್ಪಾಗಿ ದೊಡ್ಡ ಮಳೆಯು ಪ್ರಾರಂಭವಾಯಿತು. ಅಹಾಬನು ರಥದಲ್ಲಿ ಕುಳಿತುಕೊಂಡು ಇಜ್ರೇಲಿಗೆ ಹೋದನು.
Kannada BSI Bible 2016
ಆಗ ಇದ್ದ ಕ್ಕಿದ್ದ ಹಾಗೆ ಆಕಾಶವು ಮೇಘಗಳಿಂದಲೂ ಗಾಳಿ ಯಿಂದಲೂ ಕಪ್ಪಾಗಿ ದೊಡ್ಡ ಮಳೆಯು ಉಂಟಾಯಿತು. ಆದರೆ ಅಹಾಬನು ರಥದಲ್ಲಿ ಏರಿ ಇಜ್ರೇಲಿಗೆ ಹೋದನು.ಆದರೆ ಕರ್ತನ ಕೈ ಎಲೀಯನ ಮೇಲೆ ಇದ್ದದರಿಂದ ಅವನು ತನ್ನ ನಡುವನ್ನು ಕಟ್ಟಿಕೊಂಡು ಇಜ್ರೇಲಿನ ವರೆಗೂ ಅಹಾಬನಿಗೆ ಮುಂದಾಗಿ ಓಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತುಸುಹೊತ್ತಿನಲ್ಲಿಯೇ ಆಕಾಶವು ಮೋಡ ಗಾಳಿಗಳಿಂದ ಕಪ್ಪಾಗಿ ದೊಡ್ಡ ಮಳೆಯು ಪ್ರಾರಂಭವಾಯಿತು. ಅಹಾಬನು ರಥದಲ್ಲಿ ಕೂತುಕೊಂಡು ಇಜ್ರೇಲಿಗೆ ಹೋದನು.
Kannada Bible (KNCL) BSI 2016
ತುಸು ಹೊತ್ತಿನಲ್ಲಿಯೇ ಆಕಾಶವು ಕಾರ್ಮೋಡಗಾಳಿಗಳಿಂದ ತುಂಬಿ ದೊಡ್ಡ ಮಳೆ ಪ್ರಾರಂಭವಾಯಿತು. ಅಹಾಬನು ರಥದಲ್ಲಿ ಕುಳಿತುಕೊಂಡು ಜೆಸ್ರೀಲಿಗೆ ಹೋದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಇದ್ದಕ್ಕಿದ್ದ ಹಾಗೆ ಆಕಾಶವು ಮೇಘಗಳಿಂದಲೂ, ಗಾಳಿಯಿಂದಲೂ ಕಪ್ಪಾಗಿ ದೊಡ್ಡಮಳೆಯು ಉಂಟಾಯಿತು. ಅಹಾಬನು ರಥದಲ್ಲಿ ಏರಿ ಇಜ್ರೆಯೇಲ್ ಪಟ್ಟಣಕ್ಕೆ ಹೋದನು.