1 Kings 18:46 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನ ಶಕ್ತಿಯು ಎಲೀಯನ ಮೇಲೆ ಬಂದಿತು. ಎಲೀಯನು ಓಡುವುದಕ್ಕಾಗಿ ತನ್ನ ಬಟ್ಟೆಗಳನ್ನು ತನ್ನ ಸುತ್ತಲೂ ಬಿಗಿದುಕೊಂಡನು. ನಂತರ ಎಲೀಯನು ರಾಜನಾದ ಅಹಾಬನಿಗಿಂತ ಮುಂಚೆ ಇಜ್ರೇಲಿನ ದಾರಿಯುದ್ದಕ್ಕೂ ಓಡುತ್ತಲೇ ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನ ಹಸ್ತವು ಎಲೀಯನ ಸಂಗಡ ಇದ್ದುದರಿಂದ ಅವನು ನಡುಕಟ್ಟಿಕೊಂಡು ಅಹಾಬನ ಮುಂದೆ ಓಡುತ್ತಾ ಇಜ್ರೇಲನ್ನು ಸೇರಿದನು.
Kannada BSI Bible 2016
ಆದರೆ ಕರ್ತನ ಕೈ ಎಲೀಯನ ಮೇಲೆ ಇದ್ದದರಿಂದ ಅವನು ತನ್ನ ನಡುವನ್ನು ಕಟ್ಟಿಕೊಂಡು ಇಜ್ರೇಲಿನ ವರೆಗೂ ಅಹಾಬನಿಗೆ ಮುಂದಾಗಿ ಓಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ಹಸ್ತವು ಎಲೀಯನ ಸಂಗಡ ಇದ್ದದರಿಂದ ಅವನು ನಡುಕಟ್ಟಿಕೊಂಡು ಅಹಾಬನ ಮುಂದೆ ಓಡುತ್ತಾ ಇಜ್ರೇಲನ್ನು ಸೇರಿದನು.
Kannada Bible (KNCL) BSI 2016
ಸರ್ವೇಶ್ವರನ ಹಸ್ತ ಎಲೀಯನ ಸಂಗಡ ಇದ್ದುದರಿಂದ ಅವನು ನಡುಕಟ್ಟಿಕೊಂಡು ಅಹಾಬನ ಮುಂದೆ ಓಡುತ್ತಾ ಜೆಸ್ರೀಲನ್ನು ಸೇರಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರ ಕೈ ಎಲೀಯನ ಮೇಲೆ ಇದ್ದುದರಿಂದ ಅವನು ತನ್ನ ಸಡಿಲವಾದ ಬಟ್ಟೆಗಳನ್ನು ನಡುಕಟ್ಟಿಕೊಂಡು ಇಜ್ರೆಯೇಲ್ ಪಟ್ಟಣದವರೆಗೂ ಅಹಾಬನಿಗೆ ಮುಂದಾಗಿ ಓಡಿದನು.