1 Kings 18:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರಾಜನಾದ ಅಹಾಬನು ಓಬದ್ಯನಿಗೆ, “ನನ್ನ ಜೊತೆಯಲ್ಲಿ ಬಾ. ನಾವು ದೇಶದಲ್ಲಿರುವ ಪ್ರತಿಯೊಂದು ನೀರಿನ ಬುಗ್ಗೆಗಳಿಗೂ ತೊರೆಗಳಿಗೂ ಹೋಗಿ ನಮ್ಮ ಕುದುರೆಗಳಿಗೂ ಹೇಸರಕತ್ತೆಗಳಿಗೂ ಸಾಕಷ್ಟು ಹುಲ್ಲು ಸಿಕ್ಕುತ್ತದೆಯೋ ನೋಡಿಕೊಂಡು ಬರೋಣ. ಸಿಕ್ಕುವುದಾದರೆ, ನಮ್ಮ ಪಶುಗಳು ಸಾಯುವುದಿಲ್ಲ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಹಾಬನು ಅವನಿಗೆ, “ನಾವು ದೇಶಸಂಚಾರ ಮಾಡುತ್ತಾ, ಎಲ್ಲಾ ಬುಗ್ಗೆ ಹಳ್ಳಗಳಿಗೆ ಹೋಗಿ ಅವುಗಳಲ್ಲಿ ಹುಲ್ಲು ಸಿಕ್ಕುತ್ತದೋ ನೋಡೋಣ. ಸಿಕ್ಕುವುದಾದರೆ ನಮ್ಮ ಕುದುರೆಗಳೂ ಮತ್ತು ಹೇಸರಗತ್ತೆಗಳೂ ಉಳಿದಾವು, ಇಲ್ಲವಾದರೆ ಸತ್ತುಹೋಗುವವು” ಎಂದು ಹೇಳಿದನು.
Kannada BSI Bible 2016
ಅಹಾ ಬನು ಓಬದ್ಯನಿಗೆ--ನೀನು ದೇಶದಲ್ಲಿರುವ ಎಲ್ಲಾ ನೀರು ಬುಗ್ಗೆಗಳ ಬಳಿಗೂ ಎಲ್ಲಾ ಹಳ್ಳಗಳ ಬಳಿಗೂ ಹೋಗು. ನಾವು ಸಮಸ್ತ ಪಶುಗಳನ್ನು ಕಳಕೊಳ್ಳದ ಹಾಗೆ ಕುದುರೆಗಳನ್ನೂ ಹೇಸರ ಕತ್ತೆಗಳನ್ನೂ ಜೀವ ದಿಂದ ಇರಿಸುವದಕ್ಕೆ ನಮಗೆ ಒಂದು ವೇಳೆ ಹುಲ್ಲು ದೊರಕಬಹುದು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಹಾಬನು ಅವನಿಗೆ - ನಾವು ದೇಶಸಂಚಾರಮಾಡುತ್ತಾ ಎಲ್ಲಾ ಬುಗ್ಗೆ ಹಳ್ಳಗಳಿಗೆ ಹೋಗಿ ಅವುಗಳಲ್ಲಿ ಹುಲ್ಲು ಸಿಕ್ಕುತ್ತದೋ ನೋಡೋಣ; ಸಿಕ್ಕುವದಾದರೆ ನಮ್ಮ ಕುದುರೆಗಳೂ ಹೇಸರಕತ್ತೆಗಳೂ ಉಳಿಯುವವು; ಇಲ್ಲವಾದರೆ ಎಲ್ಲಾ ಸತ್ತುಹೋಗುವವು ಎಂದು ಹೇಳಿ
Kannada Bible (KNCL) BSI 2016
ಅಹಾಬನು ಅವನಿಗೆ, “ನಾವು ದೇಶಸಂಚಾರಮಾಡುತ್ತಾ ಎಲ್ಲಾ ಹಳ್ಳ ಬುಗ್ಗೆಗಳಿಗೆ ಹೋಗಿ ಅವುಗಳಲ್ಲಿ ಹುಲ್ಲು ಸಿಕ್ಕುತ್ತದೋ ನೋಡೋಣ; ಸಿಕ್ಕುವುದಾದರೆ ನಮ್ಮ ಕುದುರೆಗಳೂ ಹೇಸರಕತ್ತೆಗಳೂ ಉಳಿಯುವುವು; ಆಗ ಅವುಗಳನ್ನು ಕೊಲ್ಲುವ ಅವಶ್ಯಕತೆ ಇರುವುದಿಲ್ಲ,” ಎಂದು ಹೇಳಿ ಸಂಚಾರಕ್ಕಾಗಿ ನಾಡನ್ನು ಎರಡು ಭಾಗಮಾಡಿ, ಒಂದು ಭಾಗಕ್ಕೆ ಓಬದ್ಯನನ್ನು ಕಳುಹಿಸಿ, ಇನ್ನೊಂದು ಭಾಗಕ್ಕೆ ತಾನೇ ಹೊರಟುಹೋದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಹಾಬನು ಓಬದ್ಯನಿಗೆ, “ನೀನು ದೇಶದಲ್ಲಿರುವ ಎಲ್ಲಾ ನೀರಿನ ಬುಗ್ಗೆಗಳ ಬಳಿಗೂ, ಎಲ್ಲಾ ಹಳ್ಳಗಳ ಬಳಿಗೂ ಹೋಗು. ನಾವು ಸಮಸ್ತ ಪಶುಗಳನ್ನು ಕಳೆದುಕೊಳ್ಳದ ಹಾಗೆ ಕುದುರೆಗಳನ್ನೂ, ಹೇಸರಗತ್ತೆಗಳನ್ನೂ ಜೀವದಿಂದ ಇರಿಸುವುದಕ್ಕೆ ನಮಗೆ ಒಂದು ವೇಳೆ ಹುಲ್ಲು ದೊರಕಬಹುದು. ಆಗ ನಾವು ಅವುಗಳನ್ನು ಕೊಲ್ಲುವ ಅವಶ್ಯಕತೆ ಇರುವುದಿಲ್ಲ,” ಎಂದನು.