1 Kings 18:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಓಬದ್ಯನು ಸಂಚರಿಸುತ್ತಿರುವಾಗ ಎಲೀಯನನ್ನು ಭೇಟಿಯಾದನು. ಓಬದ್ಯನು ಎಲೀಯನನ್ನು ಕಂಡ ಕೂಡಲೇ ಅವನನ್ನು ಗುರುತಿಸಿ ಎಲೀಯನಿಗೆ ಸಾಷ್ಟಾಂಗನಮಸ್ಕಾರ ಮಾಡಿ, “ನನ್ನ ಒಡೆಯನಾದ ಎಲೀಯನು ನೀನೋ?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಓಬದ್ಯನು ಪ್ರಯಾಣಮಾಡುತ್ತಿರುವಾಗ ಎಲೀಯನು ಪಕ್ಕನೆ ಅವನಿಗೆ ಎದುರಾದನು. ಓಬದ್ಯನು ಅವನ ಗುರುತು ಹಿಡಿದು, ಸಾಷ್ಟಾಂಗನಮಸ್ಕಾರ ಮಾಡಿ, “ನೀನು ನನ್ನ ಸ್ವಾಮಿಯಾದ ಎಲೀಯನೋ?” ಎಂದು ಕೇಳಿದನು.
Kannada BSI Bible 2016
ಓಬದ್ಯನು ಮಾರ್ಗದಲ್ಲಿ ಹೋಗುತ್ತಿರುವಾಗ ಇಗೋ, ಎಲೀಯನು ಅವನನ್ನು ಸಂಧಿಸಿದನು. ಓಬದ್ಯನು ಇವನನ್ನು ಗುರುತಿಸಿ ಮೊರೆ ಕೆಳಗಾಗಿ ಬಿದ್ದು--ನೀನು ನನ್ನ ಒಡೆಯನಾದ ಎಲೀಯನಲ್ಲವೋ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಓಬದ್ಯನು ಪ್ರಯಾಣಮಾಡುತ್ತಿರುವಾಗ ಎಲೀಯನು ಫಕ್ಕನೆ ಅವನಿಗೆ ಎದುರಾದನು. ಓಬದ್ಯನು ಅವನ ಗುರುತು ಹಿಡಿದು ಸಾಷ್ಟಾಂಗನಮಸ್ಕಾರ ಮಾಡಿ - ನೀನು ನನ್ನ ಸ್ವಾವಿುಯಾದ ಎಲೀಯನೋ ಎಂದು ಕೇಳಲು ಅವನು -
Kannada Bible (KNCL) BSI 2016
ಓಬದ್ಯನು ಪ್ರಯಾಣಮಾಡುತ್ತಿರುವಾಗ ಎಲೀಯನು ತಟ್ಟನೆ ಅವನಿಗೆ ಎದುರಾದನು. ಓಬದ್ಯನು ಅವನ ಗುರುತು ಹಿಡಿದು ಸಾಷ್ಟಾಂಗ ನಮಸ್ಕಾರ ಮಾಡಿದನು. “ತಾವು ನನ್ನ ಸ್ವಾಮಿ ಎಲೀಯರೋ?’ ಎಂದು ಕೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಓಬದ್ಯನು ಮಾರ್ಗದಲ್ಲಿ ಹೋಗುತ್ತಿರುವಾಗ, ಎಲೀಯನು ಅವನನ್ನು ಸಂಧಿಸಿದನು. ಓಬದ್ಯನು ಅವನನ್ನು ಗುರುತಿಸಿ ಸಾಷ್ಟಾಂಗ ನಮಸ್ಕಾರಮಾಡಿ, “ನೀನು ನನ್ನ ಒಡೆಯನಾದ ಎಲೀಯನಲ್ಲವೋ?” ಎಂದನು.