1 Kings 19:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಲೀಯನಿಗೆ ಆ ಧ್ವನಿಯು ಕೇಳಿಸಿದಾಗ, ಅವನು ತನ್ನ ಮೇಲಂಗಿಯಿಂದ ಮುಖವನ್ನು ಮುಚ್ಚಿಕೊಂಡನು. ನಂತರ ಅವನು ಗುಹೆಯ ಹತ್ತಿರಕ್ಕೆ ಹೋಗಿ, ಅದರ ದ್ವಾರದಲ್ಲಿ ನಿಂತುಕೊಂಡನು. ಆಗ ಆ ಧ್ವನಿಯು, “ಎಲೀಯನೇ, ನೀನು ಏಕೆ ಇಲ್ಲಿರುವೆ?” ಎಂದು ಅವನನ್ನು ಕೇಳಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದನ್ನು ಕೇಳಿದ ಕೂಡಲೆ ಎಲೀಯನು ತನ್ನ ಕಂಬಳಿಯಿಂದ ಮೋರೆಯನ್ನು ಮುಚ್ಚಿಕೊಂಡು ಹೋಗಿ ಗವಿಯ ದ್ವಾರದಲ್ಲಿ ನಿಂತನು. ಆಗ, “ಎಲೀಯನೇ ನೀನು ಇಲ್ಲೇನು ಮಾಡುತ್ತೀ?” ಎಂಬ ವಾಣಿಯು ಕೇಳಿಸಿತು.
Kannada BSI Bible 2016
ಎಲೀಯನು ಅದನ್ನು ಕೇಳಿದಾಗ ತನ್ನ ಕಂಬಳಿ ಯಿಂದ ತನ್ನ ಮುಖವನ್ನು ಮುಚ್ಚಿಕೊಂಡು ಹೊರಗೆ ಬಂದು ಗವಿಯ ದ್ವಾರದಲ್ಲಿ ನಿಂತನು. ಆಗ ಇಗೋಎಲೀಯನೇ, ಇಲ್ಲಿ ಏನು ಮಾಡುತ್ತೀ ಎಂಬ ಶಬ್ದವು ಅವನಿಗೆ ಉಂಟಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಡೆಗೆ ಮಂದಮಾರುತ ಶಬ್ದ! ಅದನ್ನು ಕೇಳಿದ ಕೂಡಲೆ ಎಲೀಯನು ತನ್ನ ಕಂಬಳಿಯಿಂದ ಮೋರೆಯನ್ನು ಮುಚ್ಚಿಕೊಂಡು ಹೋಗಿ ಗವಿಯ ದ್ವಾರದಲ್ಲಿ ನಿಂತನು. ಆಗ - ಎಲೀಯನೇ, ನೀನು ಇಲ್ಲೇನು ಮಾಡುತ್ತೀ ಎಂಬ ವಾಣಿಯು ಕೇಳಿಸಿತು.
Kannada Bible (KNCL) BSI 2016
ಅದನ್ನು ಕೇಳಿದ ಕೂಡಲೆ ಎಲೀಯನು ತನ್ನ ಕಂಬಳಿಯಿಂದ ಮುಖವನ್ನು ಮುಚ್ಚಿಕೊಂಡು ಹೋಗಿ ಗವಿಯ ದ್ವಾರದಲ್ಲಿ ನಿಂತನು. ಆಗ, “ಎಲೀಯನೇ, ನೀನು ಇಲ್ಲೇನು ಮಾಡುತ್ತಿರುವೆ?” ಎಂದು ವಾಣಿ ಕೇಳಿಸಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಲೀಯನು ಅದನ್ನು ಕೇಳಿದಾಗ, ತನ್ನ ಕಂಬಳಿಯಿಂದ ತನ್ನ ಮುಖವನ್ನು ಮುಚ್ಚಿಕೊಂಡು, ಹೊರಗೆ ಬಂದು ಗವಿಯ ದ್ವಾರದಲ್ಲಿ ನಿಂತನು. ಆಗ, “ಎಲೀಯನೇ, ಇಲ್ಲಿ ಏನು ಮಾಡುತ್ತೀ?” ಎಂದು ವಾಣಿ ಕೇಳಿಸಿತು.