1 Kings 19:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಲೀಯನು, “ಸರ್ವಶಕ್ತನಾದ ಯೆಹೋವ ದೇವರೇ, ನಾನು ಯಾವಾಗಲೂ ನಿನ್ನ ಸೇವೆಯನ್ನು ಮಾಡಿದೆನು. ನಾನು ನನ್ನಿಂದ ಸಾಧ್ಯವಾದಷ್ಟು ಉತ್ತಮವಾಗಿ ನಿನ್ನ ಸೇವೆಯನ್ನು ಮಾಡಿದೆನು. ಆದರೆ ಇಸ್ರೇಲಿನ ಜನರು ನಿನ್ನೊಂದಿಗೆ ತಾವು ಮಾಡಿಕೊಂಡ ಒಡಂಬಡಿಕೆಯನ್ನು ಉಲ್ಲಂಘಿಸಿದರು. ಅವರು ನಿನ್ನ ಯಜ್ಞವೇದಿಕೆಗಳನ್ನು ನಾಶಪಡಿಸಿದರು. ಅವರು ನಿನ್ನ ಪ್ರವಾದಿಗಳನ್ನು ಕೊಂದುಹಾಕಿದರು. ಇನ್ನೂ ಜೀವಂತವಾಗಿರುವ ಪ್ರವಾದಿಯು ನಾನೊಬ್ಬನು ಮಾತ್ರ. ಅವರು ಈಗ ನನ್ನನ್ನೂ ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ!” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಅವನು, “ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ, ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ. ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ” ಎಂದು ಉತ್ತರಕೊಟ್ಟನು.
Kannada BSI Bible 2016
ಅದಕ್ಕೆ ಅವನು--ಸೈನ್ಯಗಳ ದೇವರಾದ ಕರ್ತನಿಗೋಸ್ಕರ ನಾನು ಮಹಾ ರೋಷವು ಳ್ಳವನಾಗಿದ್ದೆನು; ಯಾಕಂದರೆ ಇಸ್ರಾಯೇಲಿನ ಮಕ್ಕಳು ನಿನ್ನ ಒಡಂಬಡಿಕೆಯನ್ನು ಬಿಟ್ಟು ನಿನ್ನ ಬಲಿಪೀಠಗಳನ್ನು ಕೆಡವಿ ನಿನ್ನ ಪ್ರವಾದಿಗಳನ್ನು ಕತ್ತಿಯಿಂದ ಕೊಂದು ಹಾಕಿದ್ದಾರೆ; ನಾನೊಬ್ಬನೇ ಉಳಿದಿದ್ದೇನೆ; ಅವರು ನನ್ನ ಪ್ರಾಣವನ್ನು ತೆಗೆಯಲು ಹುಡುಕುತ್ತಾರೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಅವನು - ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲ್ಯರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ, ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ, ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವದರಲ್ಲಿ ಆಸಕ್ತನಾಗಿದ್ದೆನು; ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ ಎಂದು ಉತ್ತರಕೊಟ್ಟನು.
Kannada Bible (KNCL) BSI 2016
ಅದಕ್ಕೆ ಅವನು, “ಸೇನಾಧೀಶ್ವರರಾದ ಸರ್ವೇಶ್ವರಾ, ಇಸ್ರಯೇಲರು ನಿಮ್ಮ ನಿಬಂಧನೆಯನ್ನು ಮೀರಿದ್ದಾರೆ; ಬಲಿಪೀಠಗಳನ್ನು ಕೆಡವಿಹಾಕಿದ್ದಾರೆ; ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ; ನಾನೊಬ್ಬನೇ ಉಳಿದು ನಿಮ್ಮ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿದ್ದೆನು; ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದು ಇದ್ದಾರೆ,” ಎಂದು ಉತ್ತರಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಅವನು, “ಸರ್ವಶಕ್ತ ದೇವರಾದ ಯೆಹೋವ ದೇವರೇ, ಇಸ್ರಾಯೇಲರಿಗೋಸ್ಕರ ನಾನು ಬಹು ರೋಷವುಳ್ಳವನಾಗಿದ್ದೇನೆ. ಏಕೆಂದರೆ ಇಸ್ರಾಯೇಲರು ನಿಮ್ಮ ಒಡಂಬಡಿಕೆಯನ್ನು ಬಿಟ್ಟು, ನಿಮ್ಮ ಬಲಿಪೀಠಗಳನ್ನು ಕೆಡವಿ, ನಿಮ್ಮ ಪ್ರವಾದಿಗಳನ್ನು ಖಡ್ಗದಿಂದ ಕೊಂದುಹಾಕಿದ್ದಾರೆ. ನಾನೊಬ್ಬನೇ ಉಳಿದಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಲು ಹುಡುಕುತ್ತಿದ್ದಾರೆ,” ಎಂದನು.