1 Kings 19:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಂತರ ನಿಂಷಿಯ ಮಗನಾದ ಯೇಹುವನ್ನು ಇಸ್ರೇಲಿನ ರಾಜನನ್ನಾಗಿ ಅಭಿಷೇಕಿಸು. ಅಬೇಲ್ ಮೆಹೋಲದ ಶಾಫಾಟನ ಮಗನಾದ ಎಲೀಷನನ್ನು ನಿನ್ನ ಜಾಗದಲ್ಲಿ ಪ್ರವಾದಿಯನ್ನಾಗಿ ಅಭಿಷೇಕಿಸು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಂಷಿಯ ಮಗನಾದ ಯೇಹುವನ್ನು ಇಸ್ರಾಯೇಲರ ಅರಸನನ್ನಾಗಿಯೂ, ಆಬೇಲ್ ಮೆಹೋಲದವನೂ ಶಾಫಾಟನ ಮಗನೂ ಆದ ಎಲೀಷನನ್ನು ನಿನಗೆ ಬದಲಾಗಿ ಪ್ರವಾದಿಯನ್ನಾಗಿಯೂ ಅಭಿಷೇಕಿಸು.
Kannada BSI Bible 2016
ಹಜಾಯೇಲನ ಕತ್ತಿಗೆ ತಪ್ಪಿದವನನ್ನು ಯೇಹುವ ಕೊಂದುಹಾಕುವನು;
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಂಷಿಯ ಮಗನಾದ ಯೇಹುವನ್ನು ಇಸ್ರಾಯೇಲ್ಯರ ಅರಸನನ್ನಾಗಿಯೂ ಅಬೇಲ್‍ಮೆಹೋಲದವನೂ ಶಾಫಾಟನ ಮಗನೂ ಆದ ಎಲೀಷನನ್ನು ನಿನಗೆ ಬದಲಾಗಿ ಪ್ರವಾದಿಯನ್ನಾಗಿಯೂ ಅಭೀಷೇಕಿಸು.
Kannada Bible (KNCL) BSI 2016
ನಿಂಷಿಯ ಮಗ ಯೇಹುವನ್ನು, ಇಸ್ರಯೇಲರ ಅರಸನನ್ನಾಗಿ ಅಭಿಷೇಕಿಸು. ಅಬೇಲ್ ಮಹೋಲದವನೂ ಶಾಫಾಟನ ಮಗನೂ ಆದ ಎಲೀಷನನ್ನು ನಿನ್ನ ಉತ್ತರಾಧಿಕಾರಿಯಾದ ಪ್ರವಾದಿಯನ್ನಾಗಿ ಅಭಿಷೇಕಿಸು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ನಿಂಷಿಯ ಮಗನಾದ ಯೇಹುವನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕಿಸಿ, ಆಬೇಲ್ ಮೆಹೋಲ ಊರಿನವನಾದ ಶಾಫಾಟನ ಮಗನಾಗಿರುವ ಎಲೀಷನನ್ನು ನಿನಗೆ ಪ್ರತಿಯಾಗಿ ಪ್ರವಾದಿಯಾಗಿರಲು ಅಭಿಷೇಕಿಸು.