1 Kings 19:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಈಜೆಬೆಲಳು ಎಲೀಯನ ಬಳಿಗೆ ಒಬ್ಬ ಸಂದೇಶಕನನ್ನು ಕಳುಹಿಸಿದಳು. ಈಜೆಬೆಲಳು, “ನೀನು ಆ ಪ್ರವಾದಿಗಳನ್ನು ಕೊಂದುಹಾಕಿದಂತೆ ನಾಳೆಯ ದಿನ ನಾನು ಇದೇ ಸಮಯಕ್ಕೆ ಮುಂಚೆ, ನಿನ್ನನ್ನು ಕೊಂದುಹಾಕುವೆನೆಂದು ಪ್ರಮಾಣ ಮಾಡುತ್ತೇನೆ. ನಾನು ಈ ಕಾರ್ಯದಲ್ಲಿ ವಿಜಯಿಯಾಗದಿದ್ದಲ್ಲಿ, ದೇವರುಗಳು ನನ್ನನ್ನು ಕೊಲ್ಲಲಿ” ಎಂದು ಹೇಳಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈಜೆಬೆಲಳು ಎಲೀಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನೀನು ಪ್ರವಾದಿಗಳ ಪ್ರಾಣವನ್ನು ತೆಗೆದಂತೆ ನಾಳೆ ಇಷ್ಟು ಹೊತ್ತಿಗೆ ನಾನು ನಿನ್ನ ಪ್ರಾಣವನ್ನು ತೆಗೆಯದೇ ಹೋದರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಹೇಳಿಕಳುಹಿಸಿದಳು.
Kannada BSI Bible 2016
ಈಜೆಬೆಲಳು ಎಲೀಯನ ಬಳಿಗೆ ದೂತ ನನ್ನು ಕಳುಹಿಸಿ--ನಾನು ನಾಳೆ ಇಷ್ಟು ಹೊತ್ತಿಗೆ ಅವ ರಲ್ಲಿರುವ ಒಬ್ಬೊಬ್ಬನ ಪ್ರಾಣದ ಹಾಗೆ ನಿನ್ನ ಪ್ರಾಣಕ್ಕೂ ಮಾಡದೆ ಹೋದರೆ ದೇವರುಗಳು ನನಗೆ ಹೀಗೆಯೂ ಹೆಚ್ಚಾಗಿಯೂ ಮಾಡಲಿ ಎಂದು ಹೇಳಿದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕೆಯು ಎಲೀಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ - ನೀನು ಪ್ರವಾದಿಗಳ ಪ್ರಾಣವನ್ನು ತೆಗೆದಂತೆ ನಾಳೆ ಇಷ್ಟು ಹೊತ್ತಿಗೆ ನಾನು ನಿನ್ನ ಪ್ರಾಣವನ್ನು ತೆಗೆಯದೆ ಹೋದರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ ಎಂದು ಹೇಳಿಕಳುಹಿಸಿದಳು.
Kannada Bible (KNCL) BSI 2016
ಆಕೆ ಎಲೀಯನ ಬಳಿಗೆ ದೂತರನ್ನು ಕಳುಹಿಸಿ, “ನೀನು ಪ್ರವಾದಿಗಳ ಪ್ರಾಣವನ್ನು ತೆಗೆದಂತೆ ನಾಳೆ ಇಷ್ಟುಹೊತ್ತಿಗೆ ನಾನು ನಿನ್ನ ಪ್ರಾಣವನ್ನು ತೆಗೆಯದೆಹೋದರೆ, ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ!” ಎಂದು ಹೇಳಿಕಳುಹಿಸಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಜೆಬೆಲಳು ಎಲೀಯನ ಬಳಿಗೆ ದೂತನನ್ನು ಕಳುಹಿಸಿ, “ನಾನು ನಾಳೆ ಇಷ್ಟು ಹೊತ್ತಿಗೆ ಅವರಲ್ಲಿರುವ ಒಬ್ಬೊಬ್ಬನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವನ್ನು ತೆಗೆಯದೆ ಹೋದರೆ, ದೇವರುಗಳು ನನಗೆ ಬೇಕಾದದ್ದನ್ನು ಮಾಡಲಿ,” ಎಂದು ಹೇಳಿದಳು.