1 Kings 19:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಲೀಷನು ತಕ್ಷಣ ತನ್ನ ಎತ್ತುಗಳನ್ನು ಬಿಟ್ಟು ಎಲೀಯನ ಹಿಂದೆ ಹೋದನು. ಎಲೀಷನು, “ನನ್ನ ತಾಯಿಗೆ ಮುದ್ದಿಟ್ಟು, ತಂದೆಗೆ ನಮಸ್ಕರಿಸಿ, ನಿನ್ನನ್ನು ಹಿಂಬಾಲಿಸುತ್ತೇನೆ” ಎಂದು ಹೇಳಿದನು. ಎಲೀಯನು, “ಸರಿ, ನಾನು ನಿನ್ನನ್ನು ತಡೆಯುವುದಿಲ್ಲ” ಎಂದು ಉತ್ತರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೂಡಲೇ ಅವನು ಎತ್ತುಗಳನ್ನು ಬಿಟ್ಟು ಓಡುತ್ತಾ ಬಂದು ಎಲೀಯನಿಗೆ, “ನನ್ನ ತಂದೆತಾಯಿಗಳನ್ನು ಮುದ್ದಿಟ್ಟು ಬರುವುದಕ್ಕೆ ಅಪ್ಪಣೆಯಾಗಲಿ, ಅನಂತರ ನಿನ್ನನ್ನು ಹಿಂಬಾಲಿಸುವೆನು” ಅಂದನು. ಅದಕ್ಕೆ ಎಲೀಯನು “ಹೋಗು ನಾನು ನಿನಗೆ ಮಾಡಿರುವುದನ್ನು ಮರೆಯಬೇಡ?” ಎಂದು ಉತ್ತರಕೊಟ್ಟನು.
Kannada BSI Bible 2016
ಆಗ ಅವನು ಎತ್ತುಗಳನ್ನು ಬಿಟ್ಟು ಎಲೀಯನ ಹಿಂದೆ ಓಡಿಹೋಗಿ ಅವನಿಗೆ --ಅಪ್ಪಣೆಯಾದರೆ ನಾನು ನನ್ನ ತಂದೆತಾಯಿಗಳನ್ನು ಮುದ್ದಿಟ್ಟು ನಿನ್ನನ್ನು ಹಿಂಬಾಲಿಸುವೆನು ಅಂದನು. ಅವನು ಇವನಿಗೆ--ಹಿಂದಕ್ಕೆ ಹೋಗು; ನಾನು ನಿನಗೆ ಏನು ಮಾಡಿದೆನು ಅಂದನು.ಆಗ ಇವನು ಅವನನ್ನು ಬಿಟ್ಟು ತಿರುಗಿಕೊಂಡು ಒಂದು ಜೋಡು ಎತ್ತುಗಳನ್ನು ತಕ್ಕೊಂಡು ಅವುಗಳನ್ನು ಕೊಂದು ಆ ಜೋಡು ಎತ್ತು ಕುಂಟೆಗಳಿಂದ ಅವುಗಳ ಮಾಂಸ ವನ್ನು ಬೇಯಿಸಿ ಜನರಿಗೆ ಕೊಟ್ಟನು. ಅವರು ತಿಂದ ತರುವಾಯ ಅವನು ಎದ್ದು ಎಲೀಯನ ಹಿಂದೆ ಹೋಗಿ ಅವನಿಗೆ ಸೇವೆಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೂಡಲೆ ಅವನು ಎತ್ತುಗಳನ್ನು ಬಿಟ್ಟು ಓಡುತ್ತಾ ಬಂದು ಎಲೀಯನಿಗೆ - ನನ್ನ ತಂದೆತಾಯಿಗಳನ್ನು ಮುದ್ದಿಟ್ಟು ಬರುವದಕ್ಕೆ ಅಪ್ಪಣೆಯಾಗಲಿ; ಅನಂತರ ನಿನ್ನನ್ನು ಹಿಂಬಾಲಿಸುವೆನು ಅಂದನು. ಅದಕ್ಕೆ ಎಲೀಯನು - ಹೋಗು; ನಾನು ನಿನಗೆ ಮಾಡಿದ್ದೇನು ಎಂದು ಉತ್ತರಕೊಟ್ಟನು.
Kannada Bible (KNCL) BSI 2016
ಕೂಡಲೆ ಅವನು ಎತ್ತುಗಳನ್ನು ಬಿಟ್ಟು ಓಡುತ್ತಾ ಬಂದು ಎಲೀಯನಿಗೆ, “ನನ್ನ ತಂದೆತಾಯಿಗಳನ್ನು ಮುದ್ದಿಟ್ಟು ಬರುವುದಕ್ಕೆ ಅಪ್ಪಣೆಯಾಗಲಿ; ಅನಂತರ ನಿನ್ನನ್ನು ಹಿಂಬಾಲಿಸುವೆನು,” ಎಂದನು. ಅದಕ್ಕೆ ಎಲೀಯನು, “ಹೋಗಿ ಬಾ; ನಾನು ನಿನಗೆ ಮಾಡಬೇಕಾದದ್ದನ್ನು ಮಾಡಿದ್ದೇನೆ,” ಎಂದು ಉತ್ತರಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವನು ಎತ್ತುಗಳನ್ನು ಬಿಟ್ಟು, ಎಲೀಯನ ಹಿಂದೆ ಓಡಿಹೋಗಿ ಅವನಿಗೆ, “ಅಪ್ಪಣೆಯಾದರೆ, ನಾನು ನನ್ನ ತಂದೆತಾಯಿಗಳನ್ನು ಮುದ್ದಿಟ್ಟು ಬಂದು ನಿನ್ನನ್ನು ಹಿಂಬಾಲಿಸುವೆನು,” ಎಂದನು. ಎಲೀಯನು, “ಹೋಗು, ನಾನು ನಿನಗೆ ಏನು ಮಾಡಿದೆ?” ಎಂದನು.