1 Kings 19:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಂತರ ಎಲೀಷನು ಹೋಗಿ ತಾನು ಉಳುತ್ತಿದ್ದ ಎತ್ತುಗಳನ್ನು ವಧಿಸಿ, ಮಾಂಸವನ್ನು ನೊಗದಿಂದಲೇ ಬೇಯಿಸಿ ಜನರೆಲ್ಲರಿಗೆ ಔತಣವನ್ನು ಏರ್ಪಡಿಸಿದನು. ನಂತರ ಅವನು ಎಲೀಯನನ್ನು ಹಿಂಬಾಲಿಸಿ ಅವನ ಸಹಾಯಕನಾದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಲೀಷನು ಹಿಂದಿರುಗಿ ಹೋಗಿ ತಾನು ಉಳುತ್ತಿದ್ದ ಜೋಡಿ ಎತ್ತುಗಳನ್ನು ತೆಗೆದುಕೊಂಡು ಅವುಗಳನ್ನು ವಧಿಸಿ ಮಾಂಸವನ್ನು ರಂಟೆಯ ಕಟ್ಟಿಗೆಯಿಂದ ಬೇಯಿಸಿ, ಜನರಿಗೆ ಔತಣಮಾಡಿಸಿದನು. ಅನಂತರ ಅವನು ಎದ್ದು ಎಲೀಯನನ್ನು ಹಿಂಬಾಲಿಸಿ ಅವನ ಸೇವಕನಾದನು.
Kannada BSI Bible 2016
ಆಗ ಇವನು ಅವನನ್ನು ಬಿಟ್ಟು ತಿರುಗಿಕೊಂಡು ಒಂದು ಜೋಡು ಎತ್ತುಗಳನ್ನು ತಕ್ಕೊಂಡು ಅವುಗಳನ್ನು ಕೊಂದು ಆ ಜೋಡು ಎತ್ತು ಕುಂಟೆಗಳಿಂದ ಅವುಗಳ ಮಾಂಸ ವನ್ನು ಬೇಯಿಸಿ ಜನರಿಗೆ ಕೊಟ್ಟನು. ಅವರು ತಿಂದ ತರುವಾಯ ಅವನು ಎದ್ದು ಎಲೀಯನ ಹಿಂದೆ ಹೋಗಿ ಅವನಿಗೆ ಸೇವೆಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲೀಷನು ಹಿಂದಿರುಗಿಹೋಗಿ ತಾನು ಉಳುತ್ತಿದ್ದ ಜೋಡಿ ಎತ್ತುಗಳನ್ನು ತೆಗೆದುಕೊಂಡು ಅವುಗಳನ್ನು ವಧಿಸಿ ಮಾಂಸವನ್ನು ರಂಟೆಯ ಕಟ್ಟಿಗೆಯಿಂದ ಬೇಯಿಸಿ ಜನರಿಗೆ ಔತಣಮಾಡಿಸಿದನು. ಅನಂತರ ಅವನು ಎದ್ದು ಎಲೀಯನನ್ನು ಹಿಂಬಾಲಿಸಿ ಅವನ ಸೇವಕನಾದನು.
Kannada Bible (KNCL) BSI 2016
ಎಲೀಷನು ಹಿಂದಿರುಗಿಹೋಗಿ ತಾನು ಉಳುತ್ತಿದ್ದ ಜೋಡಿ ಎತ್ತುಗಳನ್ನು ತೆಗೆದುಕೊಂಡು ವಧಿಸಿ ಮಾಂಸವನ್ನು ನೊಗದ ಕಟ್ಟಿಗೆಯಿಂದ ಬೇಯಿಸಿ, ಜನರಿಗೆ ಔತಣಮಾಡಿಸಿದನು. ಅನಂತರ ಅವನು ಎದ್ದು ಎಲೀಯನನ್ನು ಹಿಂಬಾಲಿಸಿ ಅವನ ಶಿಷ್ಯನಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಎಲೀಷನು ಅವನನ್ನು ಬಿಟ್ಟು ತಿರುಗಿಕೊಂಡು ಒಂದು ಜೋಡು ಎತ್ತುಗಳನ್ನು ತೆಗೆದುಕೊಂಡು ಅವುಗಳನ್ನು ವಧಿಸಿ, ನೊಗದ ಕಟ್ಟಿಗೆಯಿಂದ ಅವುಗಳ ಮಾಂಸವನ್ನು ಬೇಯಿಸಿ ಜನರಿಗೆ ಕೊಟ್ಟನು. ಅವರು ತಿಂದ ತರುವಾಯ ಅವನು ಎದ್ದು ಎಲೀಯನನ್ನು ಹಿಂಬಾಲಿಸಿ ಅವನ ಸೇವಕನಾದನು.