1 Kings 19:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇದ್ದಲಿನ ಮೇಲೆ ಸುಟ್ಟ ಒಂದು ರೊಟ್ಟಿಯೂ ಒಂದು ತಂಬಿಗೆ ನೀರೂ ಅವನ ತಲೆಯ ಹತ್ತಿರದಲ್ಲಿ ಇದ್ದುದನ್ನು ಎಲೀಯನು ನೋಡಿದನು. ಎಲೀಯನು ರೊಟ್ಟಿಯನ್ನು ತಿಂದು ನೀರನ್ನು ಕುಡಿದನು. ನಂತರ ಅವನು ನಿದ್ದೆ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಲೀಯನು ಎದ್ದು ನೋಡಲಾಗಿ ಕೆಂಡದ ಮೇಲೆ ಸುಟ್ಟ ರೊಟ್ಟಿಯೂ ಒಂದು ತಂಬಿಗೆ ನೀರು ತನ್ನ ತಲೆಯ ಹತ್ತಿರ ಇರುವುದನ್ನು ಕಂಡು ಅವುಗಳನ್ನು ತೆಗೆದುಕೊಂಡು ತಿಂದು, ಕುಡಿದು ತಿರುಗಿ ಮಲಗಿದನು.
Kannada BSI Bible 2016
ಅವನು ಎದ್ದು ನೋಡಿದಾಗ ಇಗೋ, ಕೆಂಡದಲ್ಲಿ ಸುಡಲ್ಪಟ್ಟ ರೊಟ್ಟಿಯೂ ಒಂದು ತಂಬಿಗೆ ನೀರೂ ಅವನ ತಲೆಯ ಕಡೆಗೆ ಇತ್ತು. ಆಗ ಅವನು ತಿಂದು ಕುಡಿದು ತಿರಿಗಿ ಮಲಗಿಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲೀಯನು ಎದ್ದು ನೋಡಲಾಗಿ ಕೆಂಡದ ಮೇಲೆ ಸುಟ್ಟ ರೊಟ್ಟಿಯೂ ಒಂದು ತಂಬಿಗೆ ನೀರೂ ತನ್ನ ತಲೆಯ ಹತ್ತಿರ ಇರುವದನ್ನು ಕಂಡು ಅವುಗಳನ್ನು ತೆಗೆದುಕೊಂಡು ತಿಂದು ಕುಡಿದು ತಿರಿಗಿ ಮಲಗಿದನು.
Kannada Bible (KNCL) BSI 2016
ಎಲೀಯನು ಎದ್ದು ಸುತ್ತಲೂ ನೋಡಿದನು. ಕೆಂಡದ ಮೇಲೆ ಸುಟ್ಟ ರೊಟ್ಟಿಯೂ ಒಂದು ತಂಬಿಗೆ ನೀರೂ ತನ್ನ ತಲೆಯ ಹತ್ತಿರ ಇದ್ದುವು. ಅವುಗಳನ್ನು ತೆಗೆದುಕೊಂಡು ತಿಂದು, ಕುಡಿದು ಪುನಃ ಮಲಗಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಎದ್ದು ನೋಡಿದಾಗ, ಇಗೋ, ಕೆಂಡದಲ್ಲಿ ಬೇಯಿಸಿದ ರೊಟ್ಟಿಯೂ ಒಂದು ತಂಬಿಗೆ ನೀರೂ ಅವನ ತಲೆಯ ಕಡೆಗೆ ಇತ್ತು. ಆಗ ಅವನು ತಿಂದು, ಕುಡಿದು ತಿರುಗಿ ಮಲಗಿಕೊಂಡನು.