1 Kings 19:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತರುವಾಯ ಯೆಹೋವನ ದೂತನು ಅವನ ಬಳಿಗೆ ಮತ್ತೆ ಬಂದು ಅವನನ್ನು ತಟ್ಟಿ ಅವನಿಗೆ, “ಎದ್ದೇಳು! ಊಟಮಾಡು! ನೀನು ಊಟ ಮಾಡದಿದ್ದರೆ, ಬಹುದೂರ ನೀನು ಪ್ರಯಾಣ ಮಾಡಬೇಕಾಗಿರುವುದರಿಂದ ನಿನ್ನಲ್ಲಿ ಸಾಕಷ್ಟು ಶಕ್ತಿಯಿರುವುದಿಲ್ಲ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನ ದೂತನು ಎರಡನೆಯ ಸಾರಿ ಬಂದು ಅವನನ್ನು ತಟ್ಟಿ ಅವನಿಗೆ, “ಎದ್ದು ಊಟ ಮಾಡು, ನೀನು ನಿನ್ನ ಶಕ್ತಿ ಮೀರುವಷ್ಟು ಪ್ರಯಾಣಮಾಡಬೇಕಾಗಿದೆ” ಎಂದನು.
Kannada BSI Bible 2016
ತಿರಿಗಿ ಎರಡನೆಯ ಸಾರಿ ಕರ್ತನ ದೂತನು ಬಂದು ಅವನನ್ನು ತಟ್ಟಿ ಅವನಿಗೆ--ನೀನೆದ್ದು ತಿನ್ನು; ಯಾಕಂದರೆ ಪ್ರಯಾಣವು ನಿನಗೆ ಹೆಚ್ಚಾಗಿದೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ದೂತನು ಎರಡನೆಯ ಸಾರಿ ಬಂದು ಅವನನ್ನು ತಟ್ಟಿ ಅವನಿಗೆ - ಎದ್ದು ಊಟಮಾಡು; ನೀನು ನಿನ್ನ ಶಕ್ತಿ ಮೀರುವಷ್ಟು ಪ್ರಯಾಣಮಾಡಬೇಕಾಗಿದೆ ಅಂದನು.
Kannada Bible (KNCL) BSI 2016
ಸರ್ವೇಶ್ವರನ ದೂತನು ಎರಡನೆಯ ಸಾರಿ ಬಂದು ಅವನನ್ನು ತಟ್ಟಿ, “ಎದ್ದು ಊಟಮಾಡು; ನೀನು ನಿನ್ನ ಶಕ್ತಿಮೀರುವಷ್ಟು ಪ್ರಯಾಣ ಮಾಡಬೇಕಾಗಿದೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತಿರುಗಿ ಎರಡನೆಯ ಸಾರಿ ಯೆಹೋವ ದೇವರ ದೂತನು ಬಂದು, ಅವನನ್ನು ತಟ್ಟಿ ಅವನಿಗೆ, “ನೀನೆದ್ದು ತಿನ್ನು, ಏಕೆಂದರೆ ನೀನು ಬಹುದೂರ ಪ್ರಯಾಣ ಮಾಡಬೇಕಾಗಿದೆ,” ಎಂದನು.