1 Kings 19:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಲೀಯನು ಅಲ್ಲಿನ ಒಂದು ಗುಹೆಗೆ ಹೋಗಿ ರಾತ್ರಿಯೆಲ್ಲಾ ಅಲ್ಲಿ ಕಳೆದನು. ಆಗ ಯೆಹೋವನು ಎಲೀಯನೊಂದಿಗೆ ಮಾತನಾಡಿ, “ಎಲೀಯನೇ, ನೀನು ಇಲ್ಲಿರುವುದೇಕೆ?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೋರೇಬಿಗೆ ತಲುಪಿ, ಅಲ್ಲಿನ ಒಂದು ಗವಿಯಲ್ಲಿ ಇಳಿದುಕೊಂಡನು. ಆಗ ಅವನಿಗೆ ಯೆಹೋವನಿಂದ, “ಎಲೀಯನೇ ನೀನು ಇಲ್ಲೇನು ಮಾಡುತ್ತೀ?” ಎಂಬ ವಾಣಿಯು ಕೇಳಿಸಿತು.
Kannada BSI Bible 2016
ಅವನು ಅಲ್ಲಿರುವ ಒಂದು ಗವಿಗೆ ಬಂದು ಅಲ್ಲಿ ವಾಸಿಸಿದನು. ಆಗ ಇಗೋ, ಅವನಿಗೆ ಕರ್ತನ ವಾಕ್ಯ ಉಂಟಾಗಿ ಅವನಿಗೆ--ಎಲೀಯನೇ, ಇಲ್ಲಿ ಏನು ಮಾಡುತ್ತಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿನ ಒಂದು ಗವಿಯಲ್ಲಿ ಇಳುಕೊಂಡನು. ಆಗ ಅವನಿಗೆ ಯೆಹೋವನಿಂದ - ಎಲೀಯನೇ, ನೀನು ಇಲ್ಲೇನು ಮಾಡುತ್ತೀ ಎಂಬ ವಾಣಿಯು ಕೇಳಿಸಿತು.
Kannada Bible (KNCL) BSI 2016
ದೇವಗಿರಿಯಾದ ಹೋರೇಬನ್ನು ಮುಟ್ಟಿ ಅಲ್ಲಿನ ಒಂದು ಗವಿಯಲ್ಲಿ ಇಳಿದುಕೊಂಡನು. ಆಗ ಅವನಿಗೆ ಸರ್ವೇಶ್ವರನಿಂದ, “ಎಲೀಯನೇ, ಇಲ್ಲೇನು ಮಾಡುತ್ತಿರುವೆ?” ಎಂಬ ವಾಣಿ ಕೇಳಿಸಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಅಲ್ಲಿರುವ ಒಂದು ಗವಿಗೆ ಬಂದು ಅಲ್ಲಿ ವಾಸಿಸಿದನು. ಅಲ್ಲಿ ಅವನಿಗೆ ಯೆಹೋವ ದೇವರ ವಾಕ್ಯವು ಬಂದು, “ಎಲೀಯನೇ, ಇಲ್ಲಿ ಏನು ಮಾಡುತ್ತೀ?” ಎಂದರು.