1 Kings 2:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದೋನೀಯನು, “ರಾಜನಾದ ಸೊಲೊಮೋನನು ನೀನು ಏನನ್ನು ಕೇಳಿದರೂ ಮಾಡುತ್ತಾನೆಂಬುದು ನನಗೆ ತಿಳಿದಿದೆ. ಆದ್ದರಿಂದ, ಶೂನೇಮಿನ ಅಬೀಷಗ್ ಎಂಬ ಸ್ತ್ರೀಯನ್ನು ನನಗೆ ಕೊಡುವಂತೆ ದಯಮಾಡಿ ನೀನು ಅವನನ್ನು ಕೇಳು. ನಾನು ಅವಳನ್ನು ಮದುವೆಯಾಗುತ್ತೇನೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವನು, “ದಯವಿಟ್ಟು ಶೂನೇಮ್ಯಳಾದ ಅಬೀಷಗ್ ಎಂಬಾಕೆಯನ್ನು ನನಗೆ ಹೆಂಡತಿಯನ್ನಾಗಿ ಕೊಡಬೇಕೆಂದು ಅರಸನಾದ ಸೊಲೊಮೋನನಿಗೆ ಹೇಳು. ಅವನು ನಿನ್ನ ಮಾತನ್ನು ತಳ್ಳಿಹಾಕುವುದಿಲ್ಲ” ಎಂದನು.
Kannada BSI Bible 2016
ಆಕೆಯು ಅವನಿಗೆ--ಹೇಳು ಅಂದಳು. ಆಗ ಅವನು--ನೀನು ದಯಮಾಡಿ ಅರಸನಾದ ಸೊಲೊಮೋನನು ಶೂನೇ ಮ್ಯಳಾದ ಅಬೀಷಗೈಳನ್ನು ನನಗೆ ಹೆಂಡತಿಯಾಗಿ ಕೊಡಲು ಅವನನ್ನು ಕೇಳು;
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು - ದಯವಿಟ್ಟು ಶೂನೇಮ್ಯಳಾದ ಅಬೀಷಗ್ ಎಂಬಾಕೆಯನ್ನು ನನಗೆ ಹೆಂಡತಿಯನ್ನಾಗಿ ಕೊಡಬೇಕೆಂದು ಅರಸನಾದ ಸೊಲೊಮೋನನಿಗೆ ಹೇಳು; ಅವನು ನಿನ್ನ ಮಾತನ್ನು ತಳ್ಳುವದಿಲ್ಲ ಅಂದನು.
Kannada Bible (KNCL) BSI 2016
ಅವನು, “ದಯವಿಟ್ಟು ಶೂನೇಮ್ಯಳಾದ ಅಬೀಷಗಳನ್ನು ನನಗೆ ಹೆಂಡತಿಯನ್ನಾಗಿ ಕೊಡಬೇಕೆಂದು ಅರಸ ಸೊಲೊಮೋನನಿಗೆ ಹೇಳಿ; ಅವನು ನಿಮ್ಮ ಮಾತನ್ನು ತಳ್ಳುವುದಿಲ್ಲ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವನು, “ನೀನು ದಯಮಾಡಿ ಅರಸನಾದ ಸೊಲೊಮೋನನು ಶೂನೇಮ್ಯಳಾದ ಅಬೀಷಗಳನ್ನು ನನಗೆ ಹೆಂಡತಿಯಾಗಿ ಕೊಡಲು ಅವನನ್ನು ಕೇಳು. ಏಕೆಂದರೆ ಅವನು ನಿನಗೆ ಆಗುವುದಿಲ್ಲವೆಂದು ಹೇಳುವುದಿಲ್ಲ,” ಎಂದನು.