1 Kings 2:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರಾಜನಾದ ಸೊಲೊಮೋನನು ತನ್ನ ತಾಯಿಗೆ, “ಅಬೀಷಗಳನ್ನು ಅವನಿಗೆ ಕೊಡು ಎಂಬುದಾಗಿ ನೀನೇಕೆ ನನ್ನನ್ನು ಕೇಳುತ್ತಿರುವೆ? ಅವನು ನನ್ನ ಹಿರಿಯಣ್ಣನಾಗಿರುವುದರಿಂದ ಅವನನ್ನೇ ರಾಜನನ್ನಾಗಿ ಮಾಡೆಂದು ನೀನು ಕೇಳದಿರುವುದೇಕೆ? ಯಾಜಕನಾದ ಎಬ್ಯಾತಾರನೂ ಯೋವಾಬನೂ ಅವನಿಗೆ ಬೆಂಬಲವನ್ನು ನೀಡಿದರು!” ಎಂದು ಉತ್ತರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅರಸನಾದ ಸೊಲೊಮೋನನು ತನ್ನ ತಾಯಿಗೆ, “ಅದೋನೀಯನಿಗೋಸ್ಕರ ಶೂನೇಮ್ಯಳಾದ ಅಬೀಷಗ್ ಎಂಬಾಕೆಯನ್ನು ಮಾತ್ರ ಕೇಳುವುದೇಕೆ ಅವನಿಗೆ ರಾಜ್ಯವನ್ನೂ ಕೊಡಬೇಕೆಂದು ಕೇಳು. ಅವನು ನನ್ನ ಅಣ್ಣನಲ್ಲವೇ. ಯಾಜಕನಾದ ಎಬ್ಯಾತಾರನೂ ಚೆರೂಯಳ ಮಗನಾದ ಯೋವಾಬನೂ ಅವನ ಪಕ್ಷದವರಾಗಿದ್ದಾರೆ” ಎಂದು ಉತ್ತರಕೊಟ್ಟನು.
Kannada BSI Bible 2016
ಅರಸನಾದ ಸೊಲೊಮೋನನು ತನ್ನ ತಾಯಿಗೆ ಪ್ರತ್ಯುತ್ತರವಾಗಿಅದೋನೀಯನಿಗೋಸ್ಕರ ಶೂನೇಮ್ಯಳಾದ ಅಬೀಷ ಗೈಳನ್ನು ನೀನು ಕೇಳುವದೇನು? ಅವನಿಗೋಸ್ಕರ ರಾಜ್ಯ ವನ್ನು ಕೇಳು, ಅವನು ನನ್ನ ಅಣ್ಣ. ಅವನಿಗೋಸ್ಕರವೂ ಯಾಜಕನಾದ ಎಬ್ಯಾತಾರನಿಗೋಸ್ಕರವೂ ಚೆರೂ ಯಳ ಮಗನಾದ ಯೋವಾಬನಿಗೋಸ್ಕರವೂ ಕೇಳು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅರಸನಾದ ಸೊಲೊಮೋನನು ತನ್ನ ತಾಯಿಗೆ - ಅದೋನೀಯನಿಗೋಸ್ಕರ ಶೂನೇಮ್ಯಳಾದ ಅಬೀಷಗ್ ಎಂಬಾಕೆಯನ್ನು ಮಾತ್ರ ಕೇಳುವದೇಕೆ? ಅವನಿಗೆ ರಾಜ್ಯವನ್ನೂ ಕೊಡಬೇಕೆಂದು ಕೇಳು; ಅವನು ನನ್ನ ಅಣ್ಣನಲ್ಲವೇ; ಯಾಜಕನಾದ ಎಬ್ಯಾತಾರನೂ ಚೆರೂಯಳ ಮಗನಾದ ಯೋವಾಬನೂ ಅವನ ಪಕ್ಷದವರಾಗಿದ್ದಾರೆ ಎಂದು ಉತ್ತರಕೊಟ್ಟನು.
Kannada Bible (KNCL) BSI 2016
ಆಗ ಅರಸ ಸೊಲೊಮೋನನು ತನ್ನ ತಾಯಿಗೆ, “ಅದೋನೀಯನಿಗಾಗಿ ಶೂನೇಮ್ಯಳಾದ ಅಬೀಷಗಳನ್ನು ಮಾತ್ರ ಕೇಳುವುದೇಕೆ? ಅವನಿಗೆ ರಾಜ್ಯವನ್ನೂ ಕೊಡಬೇಕೆಂದು ಕೇಳು; ಅವನು ನನ್ನ ಅಣ್ಣನಲ್ಲವೇ? ಯಾಜಕ ಎಬ್ಯಾತಾರನೂ ಚೆರೂಯಳ ಮಗ ಯೋವಾಬನೂ ಅವನ ಪಕ್ಷದವರಾಗಿದ್ದಾರೆ,” ಎಂದು ಉತ್ತರಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನಾದ ಸೊಲೊಮೋನನು ತನ್ನ ತಾಯಿಗೆ ಉತ್ತರವಾಗಿ, “ಅದೋನೀಯನಿಗೋಸ್ಕರ ಶೂನೇಮ್ಯಳಾದ ಅಬೀಷಗ್ ಎಂಬಾಕೆಯನ್ನು ನೀನು ಕೇಳುವುದೇಕೆ? ರಾಜ್ಯವನ್ನೂ ಕೇಳು. ಏಕೆಂದರೆ ಅವನು ನನ್ನ ಅಣ್ಣನಾಗಿದ್ದಾನೆ. ಯಾಜಕ ಅಬಿಯಾತರನಿಗೋಸ್ಕರವೂ, ಚೆರೂಯಳ ಮಗ ಯೋವಾಬನಿಗೋಸ್ಕರವೂ ಕೇಳು,” ಎಂದನು.