1 Kings 2:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋವಾಬನು ಈ ಸಂಗತಿಯನ್ನು ಕೇಳಿ ಹೆದರಿದನು. (ಅವನು ಅಬ್ಷಾಲೋಮನಿಗೆ ಬೆಂಬಲ ನೀಡಿಲ್ಲದಿದ್ದರೂ ಅದೋನೀಯನಿಗೆ ಬೆಂಬಲ ನೀಡಿದ್ದನು.) ಯೋವಾಬನು ಯೆಹೋವನ ಗುಡಾರಕ್ಕೆ ಓಡಿಹೋಗಿ ಯಜ್ಞವೇದಿಕೆಯ ಕೊಂಬುಗಳನ್ನು ಹಿಡಿದುಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ವರ್ತಮಾನವು ಯೋವಾಬನಿಗೆ ಮುಟ್ಟಿದ ಕೂಡಲೆ ಅವನು ಯೆಹೋವನ ಗುಡಾರಕ್ಕೆ ಓಡಿಹೋಗಿ ಯಜ್ಞವೇದಿಯ ಕೊಂಬುಗಳನ್ನು ಹಿಡಿದನು. ಅವನು ಅಬ್ಷಾಲೋಮನ ಪಕ್ಷವನ್ನು ಬೆಂಬಲಿಸದಿದ್ದರು ಅದೋನೀಯನ ಪಕ್ಷವನ್ನು ಬೆಂಬಲಿಸಿದ್ದನು.
Kannada BSI Bible 2016
ಆಗ ಈ ಸುದ್ದಿ ಯೋವಾಬನಿಗೆ ಬಂತು. ಯೋವಾ ಬನು ಅಬ್ಷಾಲೋಮನ ಹಿಂದೆ ಹೋಗದೆ ಇದ್ದರೂ ಅದೋನೀಯನ ಹಿಂದೆ ಹೋದನು. ಆದದರಿಂದ ಯೋವಾಬನು ಕರ್ತನ ಮಂದಿರಕ್ಕೆ ಓಡಿ ಹೋಗಿ ಬಲಿಪೀಠದ ಕೊಂಬುಗಳನ್ನು ಹಿಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ವರ್ತಮಾನವು ಯೋವಾಬನಿಗೆ ಮುಟ್ಟಿದ ಕೂಡಲೆ ಅವನು ಯೆಹೋವನ ಗುಡಾರಕ್ಕೆ ಓಡಿಹೋಗಿ ಯಜ್ಞವೇದಿಯ ಕೊಂಬುಗಳನ್ನು ಹಿಡಿದನು. (ಅವನು ಅಬ್ಷಾಲೋಮನ ಪಕ್ಷವನ್ನು ಹಿಡಿಯದಿದ್ದರೂ ಅದೋನೀಯನ ಪಕ್ಷವನ್ನು ಹಿಡಿದಿದ್ದನು.)
Kannada Bible (KNCL) BSI 2016
ಈ ಸುದ್ದಿ ಯೋವಾಬನಿಗೆ ಮುಟ್ಟಿತು. ಅವನು ಕೂಡಲೆ ಸರ್ವೇಶ್ವರನ ಗುಡಾರಕ್ಕೆ ಓಡಿಹೋಗಿ ಬಲಿಪೀಠದ ಕೊಂಬುಗಳನ್ನು ಹಿಡಿದುಕೊಂಡನು. (ಅವನು ಅಬ್ಷಾಲೋಮನ ವಿರೋಧವಾಗಿದ್ದರೂ ಅದೋನೀಯನಿಗೆ ಪರವಾಗಿದ್ದನು.)
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಈ ಸುದ್ದಿ ಯೋವಾಬನಿಗೆ ಬಂತು. ಏಕೆಂದರೆ ಯೋವಾಬನು ಅಬ್ಷಾಲೋಮನ ಹಿಂದೆ ಹೋಗದೆ ಇದ್ದರೂ, ಅದೋನೀಯನ ಹಿಂದೆ ಹೋದನು. ಆದ್ದರಿಂದ ಯೋವಾಬನು ಯೆಹೋವ ದೇವರ ಮಂದಿರಕ್ಕೆ ಓಡಿಹೋಗಿ ಬಲಿಪೀಠದ ಕೊಂಬುಗಳನ್ನು ಹಿಡಿದನು.