1 Kings 2:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋವಾಬನು ಯೆಹೋವನ ಗುಡಾರದಲ್ಲಿ ಯಜ್ಞವೇದಿಕೆಯ ಹತ್ತಿರ ಇದ್ದಾನೆಂದು ಯಾರೋ ಒಬ್ಬನು ರಾಜನಾದ ಸೊಲೊಮೋನನಿಗೆ ತಿಳಿಸಿದನು. ಆದ್ದರಿಂದ ಸೊಲೊಮೋನನು ಬೆನಾಯನಿಗೆ, ಹೋಗಿ ಅವನನ್ನು ಕೊಂದುಬಿಡುವಂತೆ ಆಜ್ಞಾಪಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋವಾಬನು ಯೆಹೋವನ ಗುಡಾರಕ್ಕೆ ಓಡಿಹೋಗಿ ಯಜ್ಞವೇದಿಯ ಹತ್ತಿರ ಇದ್ದಾನೆ ಎಂಬ ಸುದ್ದಿಯು ಅರಸನಾದ ಸೊಲೊಮೋನನಿಗೆ ತಲುಪಿದಾಗ ಅವನು ಯೆಹೋಯಾದಾವನ ಮಗನಾದ ಬೆನಾಯನಿಗೆ, “ಹೋಗಿ ಅವನನ್ನು ಕೊಂದು ಹಾಕು” ಎಂದು ಆಜ್ಞಾಪಿಸಿದನು.
Kannada BSI Bible 2016
ಯೋವಾ ಬನು ಕರ್ತನ ಮಂದಿರಕ್ಕೆ ಓಡಿಹೋಗಿ ಇಗೋ, ಬಲಿಪೀಠದ ಬಳಿಯಲ್ಲಿ ಇದ್ದಾನೆಂಬ ಮಾತು ಅರಸ ನಾದ ಸೊಲೊಮೋನನಿಗೆ ತಿಳಿಸಲ್ಪಟ್ಟಿತು. ಆಗ ಸೊಲೊ ಮೋನನು ಯೆಹೋಯಾದಾವನ ಮಗನಾದ ಬೆನಾ ಯನಿಗೆ--ನೀನು ಹೋಗಿ ಅವನ ಮೇಲೆ ಬೀಳು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋವಾಬನು ಯೆಹೋವನ ಗುಡಾರಕ್ಕೆ ಓಡಿಹೋಗಿ ಯಜ್ಞವೇದಿಯ ಹತ್ತಿರ ಇದ್ದಾನೆ ಎಂಬ ಸುದ್ದಿಯು ಅರಸನಾದ ಸೊಲೊಮೋನನಿಗೆ ತಲುಪಿದಾಗ ಅವನು ಯೆಹೋಯಾದಾವನ ಮಗನಾದ ಬೆನಾಯನಿಗೆ - ಹೋಗಿ ಅವನ ಮೇಲೆ ಬೀಳು ಎಂದು ಆಜ್ಞಾಪಿಸಿದನು.
Kannada Bible (KNCL) BSI 2016
ಯೋವಾಬನು ಸರ್ವೇಶ್ವರನ ಗು಼ಡಾರಕ್ಕೆ ಓಡಿಹೋಗಿ ಬಲಿಪೀಠದ ಹತ್ತಿರ ಇದ್ದಾನೆ ಎಂಬ ಸುದ್ದಿ ಅರಸ ಸೊಲೊಮೋನನಿಗೆ ತಲುಪಿತು. ಅವನು ಯೆಹೋಯಾದಾವನ ಮಗ ಬೆನಾಯನಿಗೆ, “ಹೋಗಿ ಅವನನ್ನು ಕೊಂದುಹಾಕು,” ಎಂದು ಆಜ್ಞಾಪಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋವಾಬನು ಯೆಹೋವ ದೇವರ ಗುಡಾರಕ್ಕೆ ಓಡಿಹೋಗಿ ಬಲಿಪೀಠದ ಬಳಿಯಲ್ಲಿ ಇದ್ದಾನೆ, ಎಂಬ ಸುದ್ದಿ ಅರಸನಾದ ಸೊಲೊಮೋನನಿಗೆ ತಿಳಿಯಿತು. ಆಗ ಸೊಲೊಮೋನನು ಯೆಹೋಯಾದಾವನ ಮಗ ಬೆನಾಯನಿಗೆ, “ನೀನು ಹೋಗಿ ಅವನನ್ನು ಕೊಂದುಹಾಕು,” ಎಂದನು.