1 Kings 2:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬೆನಾಯನು ಯೆಹೋವನ ಗುಡಾರದೊಳಕ್ಕೆ ಹೋಗಿ ಯೋವಾಬನಿಗೆ, “ರಾಜನ ಆಜ್ಞೆಯಂತೆ ‘ಹೊರಗೆ ಬಾ!”‘ ಎಂದು ಹೇಳಿದನು. ಆದರೆ ಯೋವಾಬನು, “ಇಲ್ಲ, ನಾನಿಲ್ಲೇ ಸಾಯುತ್ತೇನೆ” ಎಂದನು. ಆದ್ದರಿಂದ ಬೆನಾಯನು ರಾಜನ ಬಳಿಗೆ ಹಿಂದಿರುಗಿ ಯೋವಾಬನು ಹೇಳಿದ್ದನ್ನು ತಿಳಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೆನಾಯನು ಯೆಹೋವನ ಗುಡಾರಕ್ಕೆ ಹೋಗಿ ಯೋವಾಬನಿಗೆ, “ಅರಸನು ನಿನಗೆ ಹೊರಗೆ ಬರಬೇಕೆಂದು ಆಜ್ಞಾಪಿಸುತ್ತಾನೆ” ಎಂದು ಹೇಳಲು ಅವನು “ಬರುವುದಿಲ್ಲ, ನಾನು ಇಲ್ಲಿಯೇ ಸಾಯುತ್ತೇನೆ” ಎಂದು ಉತ್ತರಕೊಟ್ಟನು. ಬೆನಾಯನು ಅರಸನ ಬಳಿಗೆ ಹೋಗಿ ಯೋವಾಬನು ಹೇಳಿದ್ದನ್ನು ತಿಳಿಸಿದನು.
Kannada BSI Bible 2016
ಬೆನಾಯನು ಕರ್ತನ ಮಂದಿರಕ್ಕೆ ಬಂದು ಅವನಿಗೆ--ನೀನು ಹೊರಗೆ ಬರಬೇಕೆಂದು ಅರಸನು ಹೇಳುತ್ತಾನೆ ಅಂದನು. ಅದಕ್ಕವನು--ಇಲ್ಲ, ಇಲ್ಲಿಯೇ ಸಾಯುತ್ತೇನೆ ಅಂದನು. ಬೆನಾಯನು ಅರಸನ ಬಳಿಗೆ ತಿರಿಗಿ ಹೋಗಿ ಯೋವಾಬನು ಹೀಗೆ ಹೇಳಿ ನನಗೆ ಪ್ರತ್ಯುತ್ತರಕೊಟ್ಟನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೆನಾಯನು ಯೆಹೋವನ ಗುಡಾರಕ್ಕೆ ಹೋಗಿ ಯೋವಾಬನಿಗೆ - ಅರಸನು ನಿನಗೆ ಹೊರಗೆ ಬರಬೇಕೆಂದು ಆಜ್ಞಾಪಿಸುತ್ತಾನೆ ಎಂದು ಹೇಳಲು ಅವನು - ಬರುವದಿಲ್ಲ, ನಾನು ಇಲ್ಲಿಯೇ ಸಾಯುತ್ತೇನೆ ಎಂದು ಉತ್ತರ ಕೊಟ್ಟನು. ಬೆನಾಯನು ಅರಸನ ಬಳಿಗೆ ಹೋಗಿ ಯೋವಾಬನು ಅಂದದ್ದನ್ನು ತಿಳಿಸಲು
Kannada Bible (KNCL) BSI 2016
ಬೆನಾಯನು ಸರ್ವೇಶ್ವರನ ಗುಡಾರಕ್ಕೆ ಹೋಗಿ ಯೋವಾಬನಿಗೆ, “ನೀನು ಹೊರಗೆ ಬರಬೇಕೆಂದು ಅರಸರು ಆಜ್ಞಾಪಿಸುತ್ತಾರೆ,” ಎಂದನು. ಆದರೆ ಅವನು, “ಬರುವುದಿಲ್ಲ, ನಾನು ಇಲ್ಲಿಯೇ ಸಾಯುತ್ತೇನೆ,” ಎಂದು ಉತ್ತರಕೊಟ್ಟನು. ಬೆನಾಯನು ಅರಸನ ಬಳಿಗೆ ಹೋಗಿ ಯೋವಾಬನು ಹೇಳಿದ್ದನ್ನು ತಿಳಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೆನಾಯನು ಯೆಹೋವ ದೇವರ ಗುಡಾರಕ್ಕೆ ಬಂದು ಯೋವಾಬನಿಗೆ, “ನೀನು ಹೊರಗೆ ಬರಬೇಕೆಂದು ಅರಸನು ಹೇಳುತ್ತಾನೆ,” ಎಂದನು. ಅದಕ್ಕವನು, “ಇಲ್ಲ, ಇಲ್ಲಿಯೇ ಸಾಯುತ್ತೇನೆ,” ಎಂದನು. ಬೆನಾಯನು ಅರಸನ ಬಳಿಗೆ ತಿರುಗಿ ಹೋಗಿ ಯೋವಾಬನು ಹೇಳಿದ್ದನ್ನು ತಿಳಿಸಿದನು.