1 Kings 2:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋವಾಬನು ತನಗಿಂತಲೂ ಬಹಳಷ್ಟು ಉತ್ತಮರಾದ ಇಬ್ಬರನ್ನು ಕೊಂದುಹಾಕಿದನು. ಅವರು ಯಾರೆಂದರೆ” ನೇರನ ಮಗನಾದ ಅಬ್ನೇರ ಮತ್ತು ಯೆತೆರನ ಮಗನಾದ ಅಮಾಸ. ಅಬ್ನೇರನು ಇಸ್ರೇಲಿನ ಸೇನಾಧಿಪತಿಯಾಗಿದ್ದನು; ಅಮಾಸನು ಯೆಹೂದದ ಸೇನಾಧಿಪತಿಯಾಗಿದ್ದನು. ಯೋವಾಬನು ಅವರನ್ನು ಕೊಂದನೆಂಬುದು ಆ ಸಮಯದಲ್ಲಿ ನನ್ನ ತಂದೆಯಾದ ದಾವೀದನಿಗೆ ತಿಳಿಯಲಿಲ್ಲ. ಯೋವಾಬನು ಅವರನ್ನು ಕೊಂದದ್ದರಿಂದ ಯೆಹೋವನು ಅವನನ್ನು ದಂಡಿಸುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಈ ರಕ್ತಾಪರಾಧವನ್ನು ಅವನ ತಲೆ ಮೇಲೆಯೇ ಬರಮಾಡಲಿ. ಅವನು ನನ್ನ ತಂದೆಯಾದ ದಾವೀದನಿಗೆ ತಿಳಿಯದೇ ತನಗಿಂತ ಉತ್ತಮರೂ ಮತ್ತು ನೀತಿವಂತರೂ ಆದ ಇಬ್ಬರು ಮನುಷ್ಯರನ್ನು ಎಂದರೆ ಇಸ್ರಾಯೇಲ್ ಸೇನಾಧಿಪತಿಯೂ, ನೇರನ ಮಗನೂ ಆದ ಅಬ್ನೇರನನ್ನೂ, ಯೆಹೂದ ಸೇನಾಧಿಪತಿಯೂ ಯೆತೆರನ ಮಗನೂ ಆದ ಅಮಾಸನನ್ನೂ ಕತ್ತಿಯಿಂದ ಕೊಂದನಲ್ಲಾ.
Kannada BSI Bible 2016
ಆಗ ಕರ್ತನು ಅವನ ತಲೆಯ ಮೇಲೆ ಅವನ ರಕ್ತಾಪರಾಧ ವನ್ನು ಬರಮಾಡುವನು. ನನ್ನ ತಂದೆಯಾದ ದಾವೀ ದನು ತಿಳಿಯದಿರುವಾಗ ಅವನು ತನಗಿಂತ ನೀತಿಯುಳ್ಳ ಉತ್ತಮರಾದ ಇಬ್ಬರ ಮೇಲೆ ಬಿದ್ದು ಅವರನ್ನು ಕತ್ತಿ ಯಿಂದ ಕೊಂದನು. ಅವರು ಯಾರಂದರೆ, ಇಸ್ರಾ ಯೇಲಿನ ಸೈನ್ಯಕ್ಕೆ ಅಧಿಪತಿಯಾಗಿದ್ದ ನೇರನ ಮಗನಾದ ಅಬ್ನೇರನೂ ಯೆಹೂದ ಸೈನ್ಯಕ್ಕೆ ಅಧಿಪತಿಯಾಗಿದ್ದ ಯೆತೆರನ ಮಗನಾದ ಅಮಾಸನೂ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಈ ರಕ್ತಾಪರಾಧವನ್ನು ಅವನ ತಲೆಯ ಮೇಲೆಯೇ ಬರಮಾಡಲಿ. ಅವನು ನನ್ನ ತಂದೆಯಾದ ದಾವೀದನಿಗೆ ತಿಳಿಯದೆ ತನಗಿಂತ ಉತ್ತಮರೂ ನೀತಿವಂತರೂ ಆದ ಇಬ್ಬರು ಮನುಷ್ಯರನ್ನು ಅಂದರೆ ಇಸ್ರಾಯೇಲ್ ಸೇನಾಪತಿಯೂ ನೇರನ ಮಗನೂ ಆದ ಅಬ್ನೇರನನ್ನೂ ಯೆಹೂದಸೇನಾಪತಿಯೂ ಯೆತೆರೆನ ಮಗನೂ ಆದ ಅಮಾಸನನ್ನೂ ಕೊಂದನಲ್ಲಾ.
Kannada Bible (KNCL) BSI 2016
ಸರ್ವೇಶ್ವರ ಈ ರಕ್ತ ಅಪರಾಧವನ್ನು ಅವನ ತಲೆಯ ಮೇಲೆಯೇ ಬರಮಾಡಲಿ; ಅವನು ನನ್ನ ತಂದೆ ದಾವೀದನಿಗೆ ತಿಳಿಯದೆ ತನಗಿಂತ ಉತ್ತಮರೂ ನೀತಿವಂತರೂ ಆದ ಇಬ್ಬರು ವ್ಯಕ್ತಿಗಳನ್ನು ಅಂದರೆ, ಇಸ್ರಯೇಲ್ ಸೇನಾಪತಿಯೂ ನೇರನ ಮಗನೂ ಆದ ಅಬ್ನೇರನನ್ನೂ ಯೆಹೂದ ಸೇನಾಪತಿಯೂ ಯೆತೆರನ ಮಗನೂ ಆದ ಅಮಾಸನನ್ನೂ ಕೊಂದನಲ್ಲವೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರು ಅವನ ತಲೆಯ ಮೇಲೆ ಅವನ ರಕ್ತಾಪರಾಧವನ್ನು ಬರಮಾಡುವರು. ಏಕೆಂದರೆ ಅವನು ನನ್ನ ತಂದೆ ದಾವೀದನಿಗೆ ತಿಳಿಯದೆ ತನಗಿಂತ ಉತ್ತಮರೂ ನೀತಿವಂತರೂ ಆದ ಇಬ್ಬರು ವ್ಯಕ್ತಿಗಳನ್ನು ಖಡ್ಗದಿಂದ ಕೊಂದನು. ಅವರು ಯಾರೆಂದರೆ, ಇಸ್ರಾಯೇಲಿನ ಸೈನ್ಯಕ್ಕೆ ಅಧಿಪತಿಯೂ ನೇರನ ಮಗನೂ ಆದ ಅಬ್ನೇರನು, ಯೆಹೂದ ಸೈನ್ಯಕ್ಕೆ ಅಧಿಪತಿಯೂ ಯೆತೆರನ ಮಗನೂ ಆದ ಅಮಾಸನು.