1 Kings 2:35 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಯೆಹೋಯಾದಾವನ ಮಗನಾದ ಬೆನಾಯನನ್ನು ಯೋವಾಬನ ಸ್ಥಾನದಲ್ಲಿ ಸೇನಾಧಿಪತಿಯನ್ನಾಗಿ ಸೊಲೊಮೋನನು ನೇಮಿಸಿದನು. ಎಬ್ಯಾತಾರನ ಸ್ಥಾನದಲ್ಲಿ ಚಾದೋಕನನ್ನು ನೂತನ ಪ್ರಧಾನಯಾಜಕನನ್ನಾಗಿ ನೇಮಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನು ಯೋವಾಬನಿಗೆ ಬದಲಾಗಿ ಯೆಹೋಯಾದಾವನ ಮಗನಾದ ಬೆನಾಯನನ್ನು ಸೈನ್ಯಾಧಿಪತಿಯನ್ನಾಗಿಯೂ ಮತ್ತು ಎಬ್ಯಾತಾರನಿಗೆ ಬದಲಾಗಿ ಚಾದೋಕನನ್ನು ಯಾಜಕನನ್ನಾಗಿಯೂ ನೇಮಿಸಿದನು.
Kannada BSI Bible 2016
ಆಗ ಅರಸನು ಯೆಹೋಯಾದಾವನ ಮಗನಾದ ಬೆನಾಯನನ್ನು ಯೋವಾಬನಿಗೆ ಬದಲಾಗಿ ಸೈನ್ಯದ ಮೇಲೆ ನೇಮಿಸಿದನು. ಇದಲ್ಲದೆ ಅರಸನು ಎಬ್ಯಾ ತಾರನಿಗೆ ಬದಲಾಗಿ ಯಾಜಕನಾದ ಚಾದೋಕನನ್ನು ನೇಮಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನು ಯೋವಾಬನಿಗೆ ಬದಲಾಗಿ ಯೆಹೋಯಾದಾವನ ಮಗನಾದ ಬೆನಾಯನನ್ನು ಸೈನ್ಯಾಧಿಪತಿಯನ್ನಾಗಿಯೂ ಎಬ್ಯಾತಾರನಿಗೆ ಬದಲಾಗಿ ಚಾದೋಕನನ್ನು ಯಾಜಕನನ್ನಾಗಿಯೂ ನೇವಿುಸಿದನು.
Kannada Bible (KNCL) BSI 2016
ಅರಸನು ಯೋವಾಬನಿಗೆ ಬದಲಾಗಿ ಯೆಹೋಯಾದಾವನ ಮಗ ಬೆನಾಯನನ್ನು ಸೈನ್ಯಾಧಿಪತಿಯನ್ನಾಗಿ ಹಾಗು ಎಬ್ಯಾತಾರನಿಗೆ ಬದಲಾಗಿ ಚಾದೋಕನನ್ನು ಯಾಜಕನನ್ನಾಗಿ ನೇಮಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅರಸನು ಯೆಹೋಯಾದಾವನ ಮಗ ಬೆನಾಯನನ್ನು ಯೋವಾಬನಿಗೆ ಬದಲಾಗಿ ಸೈನ್ಯದ ಮೇಲೆ ನೇಮಿಸಿದನು. ಇದಲ್ಲದೆ ಅರಸನು ಅಬಿಯಾತರನಿಗೆ ಬದಲಾಗಿ ಯಾಜಕನಾದ ಚಾದೋಕನನ್ನು ನೇಮಿಸಿದನು.