1 Kings 2:37 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ನಗರವನ್ನು ಬಿಟ್ಟು ಕಿದ್ರೋನ್ ಹೊಳೆಯ ಹಿಂದಕ್ಕೆ ಹೋದರೆ, ನಿನ್ನನ್ನು ಕೊಲ್ಲಲಾಗುವುದು. ಅದು ನಿನ್ನ ಸ್ವಂತ ತಪ್ಪಾಗುವುದು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಇದನ್ನು ಬಿಟ್ಟು ಕಿದ್ರೋನ್ ಹಳ್ಳದ ಆಚೆಗೆ ಹೋದೆಯಾದರೆ ಅದೇ ದಿನದಲ್ಲಿ ನಿನಗೆ ಮರಣಶಿಕ್ಷೆಯಾಗುವುದೆಂದು ತಿಳಿದುಕೋ ಮತ್ತು ಆ ರಕ್ತಾಪರಾಧವು ನಿನ್ನ ತಲೆಯ ಮೇಲೆಯೇ ಇರುವುದು” ಎಂದು ಹೇಳಿದನು.
Kannada BSI Bible 2016
ಯಾವ ದಿನದಲ್ಲಿ ನೀನು ಹೊರಟು ಕಿದ್ರೋನೆಂಬ ಹಳ್ಳವನ್ನು ದಾಟುವಿಯೋ ಆ ದಿನದಲ್ಲಿ ನಿಶ್ಚಯವಾಗಿ ಸಾಯುವಿ ಎಂದು ಖಂಡಿತಾ ತಿಳಿದುಕೋ. ನಿನ್ನ ರಕ್ತವು ನಿನ್ನ ತಲೆಯ ಮೇಲೆ ಇರುವದು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಇದನ್ನು ಬಿಟ್ಟು ಕಿದ್ರೋನ್‍ಹಳ್ಳದ ಆಚೆಗೆ ಹೋದಿಯಾದರೆ ಅದೇ ದಿವಸದಲ್ಲಿ ನಿನಗೆ ಮರಣಶಿಕ್ಷೆಯಾಗುವದೆಂದು ತಿಳಿದುಕೋ; ಮತ್ತು ಆ ರಕ್ತಾಪರಾಧವು ನಿನ್ನ ತಲೆಯ ಮೇಲೆಯೇ ಇರುವದು ಎಂದು ಹೇಳಿದನು.
Kannada Bible (KNCL) BSI 2016
ನೀನು ಇದನ್ನು ಬಿಟ್ಟು ಕಿದ್ರೋನ್ ಹಳ್ಳದ ಆಚೆಗೆ ಹೋದೆಯಾದರೆ, ಅದೇ ದಿವಸ ನಿನಗೆ ಮರಣಶಿಕ್ಷೆಯಾಗುವುದೆಂದು ತಿಳಿದುಕೋ; ಮತ್ತು ಆ ರಕ್ತಾಪರಾಧವು ನಿನ್ನ ತಲೆಯ ಮೇಲೆಯೇ ಇರುವುದು,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾವ ದಿವಸದಲ್ಲಿ ನೀನು ಹೊರಟು ಕಿದ್ರೋನೆಂಬ ಹಳ್ಳವನ್ನು ದಾಟುವೆಯೋ, ಆ ದಿವಸದಲ್ಲಿ ನಿಶ್ಚಯವಾಗಿ ಸಾಯುವೆ ಎಂದು ಖಂಡಿತ ತಿಳಿದುಕೋ ಮತ್ತು ನಿನ್ನ ರಕ್ತವು ನಿನ್ನ ತಲೆಯ ಮೇಲೆ ಇರುವುದು,” ಎಂದನು.