1 Kings 2:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ಯೆಹೋವನಿಗೆ ವಿಧೇಯನಾದರೆ, ಆಗ ಯೆಹೋವನು ನನಗೆ ಮಾಡಿದ ವಾಗ್ದಾನವನ್ನು ಈಡೇರಿಸುವನು. ಯೆಹೋವನು ನನಗೆ ಈ ರೀತಿ ವಾಗ್ದಾನ ಮಾಡಿರುವನು: ‘ನಿನ್ನ ಮಕ್ಕಳು ನಂಬಿಗಸ್ತರಾಗಿ ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ನನ್ನ ಆಜ್ಞೆಗಳಿಗೆ ವಿಧೇಯರಾಗಿ ಜೀವಿಸುವುದಾಗಿದ್ದರೆ, ನಿನ್ನ ವಂಶದವರಲ್ಲಿ ಒಬ್ಬನು ಯಾವಾಗಲೂ ಇಸ್ರೇಲಿನ ಜನರನ್ನು ಆಳುವವನಾಗಿರುತ್ತಾನೆ.”‘
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ಯೆಹೋವನು, ‘ನಿನ್ನ ಸಂತಾನದವರು ನಂಬಿಗಸ್ತರಾಗಿ, ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ ನನಗೆ ನಡೆದುಕೊಳ್ಳುವುದರಲ್ಲಿ ಜಾಗರೂಕರಾಗಿರುವುದಾದರೆ, ಅವರು ತಪ್ಪದೆ ಇಸ್ರಾಯೇಲರ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು’ ಎಂಬುದಾಗಿ ತಾನು ನನಗೆ ಮಾಡಿದ ವಾಗ್ದಾನವನ್ನು ಸ್ಥಿರಪಡಿಸುವನು,
Kannada BSI Bible 2016
ನೀನು ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿರುವ ಪ್ರಕಾರ ನಿನ್ನ ದೇವರಾದ ಕರ್ತನ ನಿಯಮಗಳನ್ನೂ ಆಜ್ಞೆಗಳನ್ನೂ ನ್ಯಾಯಗಳನ್ನೂ ಸಾಕ್ಷಿಗಳನ್ನೂ ಕೈಕೊಂಡು ಆತನ ಮಾರ್ಗದಲ್ಲಿ ನಡೆಯುವ ಹಾಗೆ ಆತನ ಆಜ್ಞೆಯನ್ನು ಕೈಗೊಳ್ಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಯೆಹೋವನು - ನಿನ್ನ ಸಂತಾನದವರು ನಂಬಿಗಸ್ತರಾಗಿ ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ನನಗೆ ನಡೆದುಕೊಳ್ಳುವದರಲ್ಲಿ ಜಾಗರೂಕರಾಗಿರುವದಾದರೆ ಅವರು ತಪ್ಪದೆ ಇಸ್ರಾಯೇಲ್ ಸಿಂಹಾಸನದ ಮೇಲೆ ಕೂತುಕೊಳ್ಳುವರು ಎಂಬದಾಗಿ ತಾನು ನನಗೆ ಮಾಡಿದ ವಾಗ್ದಾನವನ್ನು ಸ್ಥಿರಪಡಿಸುವನು.
Kannada Bible (KNCL) BSI 2016
ಇದಲ್ಲದೆ ಸರ್ವೇಶ್ವರ, ‘ನಿನ್ನ ಸಂತಾನದವರು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ನನಗೆ ನಂಬಿಗಸ್ತರಾಗಿ ನಡೆದುಕೊಳ್ಳುವುದರಲ್ಲಿ ಜಾಗರೂಕರಾಗಿದ್ದರೆ ಅವರು ಇಸ್ರಯೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವುದು ತಪ್ಪದು,’ ಎಂದು ನನಗೆ ಮಾಡಿದ ವಾಗ್ದಾನವನ್ನು ಅವರು ಸ್ಥಿರಪಡಿಸುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು, ‘ನಿನ್ನ ಮಕ್ಕಳು ತಾವು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ನನ್ನ ಮುಂದೆ ನಂಬಿಗಸ್ತರಾಗಿ ನಡೆದುಕೊಳ್ಳುವ ಹಾಗೆ ತಮ್ಮ ಮಾರ್ಗವನ್ನು ಕಾದುಕೊಂಡರೆ ಅವರು ಇಸ್ರಾಯೇಲಿನ ಸಿಂಹಾಸನದ ಮೇಲೆ ತಪ್ಪದೇ ಕುಳಿತುಕೊಳ್ಳುವರು,’ ಎಂದು ನನಗೆ ಹೇಳಿದ ತಮ್ಮ ವಾಕ್ಯವನ್ನು ಸ್ಥಿರಪಡಿಸುವರು.