1 Kings 2:46 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಂತರ ರಾಜನು ಶಿಮ್ಮಿಯನ್ನು ಕೊಲ್ಲಲು ಬೆನಾಯನಿಗೆ ಆಜ್ಞಾಪಿಸಿದನು. ಅಂತೆಯೇ, ಬೆನಾಯನು ಅವನನ್ನು ಸಂಹರಿಸಿದನು. ಹೀಗೆ ಸೊಲೊಮೋನನ ರಾಜ್ಯಾಧಿಕಾರವು ಸ್ಥಿರವಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋಯಾದಾವನ ಮಗನಾದ ಬೆನಾಯನಿಗೆ, “ಅವನನ್ನು ಸಂಹರಿಸು” ಎಂದು ಆಜ್ಞಾಪಿಸಲು ಅವನು ಹೊರಗೆ ಹೋಗಿ ಅವನ ಮೇಲೆ ಬಿದ್ದು ಅವನನ್ನು ಕೊಂದುಹಾಕಿದನು. ಹೀಗೆ ಸೊಲೊಮೋನನ ರಾಜ್ಯಾಧಿಕಾರವು ಸುಭದ್ರವಾಯಿತು.
Kannada BSI Bible 2016
ಆಗ ಅರಸನು ಯೆಹೋಯಾದಾವನ ಮಗನಾದ ಬೆನಾಯ ನಿಗೆ ಆಜ್ಞಾಪಿಸಿದ್ದರಿಂದ ಅವನು ಹೊರಟು ಅವನ ಮೇಲೆ ಬಿದ್ದನು; ಅವನು ಸತ್ತನು. ಹೀಗೆ ರಾಜ್ಯವು ಸೊಲೊಮೋನನ ಕೈಯಲ್ಲಿ ಸ್ಥಿರ ಮಾಡಲ್ಪಟ್ಟಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋಯಾದಾವನ ಮಗನಾದ ಬೆನಾಯನಿಗೆ ಅವನನ್ನು ಸಂಹರಿಸೆಂದು ಆಜ್ಞಾಪಿಸಲು ಇವನು ಹೊರಗೆ ಹೋಗಿ ಅವನ ಮೇಲೆ ಬಿದ್ದು ಅವನನ್ನು ಕೊಂದುಹಾಕಿದನು. ಹೀಗೆ ಸೊಲೊಮೋನನ ರಾಜ್ಯಾಧಿಕಾರವು ಸ್ಥಿರವಾಯಿತು.
Kannada Bible (KNCL) BSI 2016
ಬಳಿಕ ಯೆಹೋಯಾದವನ ಮಗ ಬೆನಾಯನಿಗೆ ಅವನನ್ನು ಸಂಹರಿಸಬೇಕೆಂದು ಆಜ್ಞಾಪಿಸಿದನು. ಅಂತೆಯೇ ಇವನು ಹೊರಗೆ ಹೋಗಿ ಅವನ ಮೇಲೆ ಬಿದ್ದು ಅವನನ್ನು ಕೊಂದುಹಾಕಿದನು. ಹೀಗೆ ಸೊಲೊಮೋನನ ರಾಜ್ಯಾಧಿಕಾರ ಸುಭದ್ರವಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅರಸನಾದ ಸೊಲೊಮೋನನು ಯೆಹೋಯಾದಾವನ ಮಗ ಬೆನಾಯನಿಗೆ ಆಜ್ಞಾಪಿಸಿದ್ದರಿಂದ, ಅವನು ಹೊರಟು ಹೋಗಿ ಶಿಮ್ಮಿಯ ಮೇಲೆ ಬಿದ್ದು ಅವನನ್ನು ಕೊಂದುಹಾಕಿದನು. ಹೀಗೆ ರಾಜ್ಯವು ಸೊಲೊಮೋನನ ಕೈಯಲ್ಲಿ ಸ್ಥಿರವಾಯಿತು.